ಮಂಗಳೂರು ದಸರಾ ಮುಗಿಸಿ ವಾಪಾಸಾಗುತ್ತಿದ್ದಾಗ ಬೈಕ್ ಅಪಘಾತ | ಇಬ್ಬರು ಯುವಕರು ಮೃತ್ಯು

Share the Article

ಬೈಕ್ ಅಪಘಾತಕ್ಕೀಡಾಗಿ ಮಂಗಳೂರು ದಸರಾ ಮುಗಿಸಿ ವಾಪಸ್ಸಾಗುತ್ತಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ರಾ.ಹೆ. 66ರ ಕೆ.ಸಿ ರೋಡ್ ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.

ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಮೃತರು. ನಿನ್ನೆ ರಾತ್ರಿ ಯುವಕರಿಬ್ಬರು ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಅಪಘಾತ ನಡೆದಿದೆ.

ಬೈಕ್ ಸ್ಕಿಡ್ ಆಗಿ ಅಪಘಾತ ನಡೆದಿರುವುದಾಗಿ ತಿಳಿದುಬಂದಿದೆ. ಯುವಕರಿಬ್ಬರ ರಕ್ಷಣೆಗೆ ಧಾವಿಸಿದ ಕಾರು ಚಾಲಕನ ವಿರುದ್ಧವೇ ಸ್ಥಳೀಯರು ಆರೋಪಿಸಿದ್ದು, ಪೊಲೀಸರ ವಿಚಾರಣೆ ವೇಳೆ ಆತನ ತಪ್ಪಿಲ್ಲವೆಂದು ತಿಳಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave A Reply