ಪುತ್ತೂರು: ಸರಕಾರಿ ಐಟಿಐ‌ಗೆ ಪ್ರವೇಶ ಪ್ರಕ್ರಿಯೆ ಆರಂಭ | ಅ.21ರಂದು ಕೊನೆಯ ದಿನ

Share the Article

ಪುತ್ತೂರು: ನರಿಮೊಗರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಸಿ.ವಿ.ಟಿ. (ಸ್ಟೇಟ್ ಕೌನ್ಸಿಲ್ ಫಾರ್ ವೊಕೇಷನಲ್ ಟ್ರೈನಿಂಗ್) ಅಡಿಯಲ್ಲಿ 2021-22ನೇ ಸಾಲಿನಲ್ಲಿ “ಇಂಡಸ್ಟ್ರಿಯಲ್ ರೊಬೋಟಿಕ್ ಆಂಡ್ ಡಿಜಿಟಲ್ ಮ್ಯಾನುಫ್ಯಾಕ್ಟರಿಂಗ್ ಮತ್ತು “ಅಡ್ವಾನ್ಸ್‌ಡ್ ಮ್ಯಾನುಫ್ಯಾಕ್ಟರಿಂಗ್” ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ಸಹಭಾಗಿತ್ವ ವಹಿಸಿದೆ.

1 ವರ್ಷ ಅವಧಿಯ “ಇಂಡಸ್ಟ್ರಿಯಲ್ ರೊಬೋಟಿಕ್ ಆಂಡ್ ಡಿಜಿಟಲ್ ಮ್ಯಾನುಫ್ಯಾಕ್ಟರಿಂಗ್ ಮತ್ತು 2ವರ್ಷ ಅವಧಿಯ “ಅಡ್ವಾನ್ಸ್‌ಡ್ ಮ್ಯಾನುಫ್ಯಾಕ್ಟರಿಂಗ್” ಕೋರ್ಸ್‌ಗಳಿಗೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಅ. 21 ಕೊನೆ ದಿನ ಎಂದು ನರಿಮೊಗರು ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave A Reply