ಬಂಟ್ವಾಳ | ಕಟ್ಟೆಯಲ್ಲಿದ್ದ ಭಗವಾಧ್ವಜ ಹಾಗೂ ಹನುಮನ ಚಿತ್ರಕ್ಕೆ ಹಾನಿಗೈದ ದುಷ್ಕರ್ಮಿಗಳು, ದೂರು ದಾಖಲು

Share the Article

ಮಾರ್ಗಸೂಚಿ ಕಟ್ಟೆಯಲ್ಲಿದ್ದ ಭಗವಾಧ್ವಜ ಹಾಗೂ ಹನುಮಂತನ ಚಿತ್ರಕ್ಕೆ ದುಷ್ಕರ್ಮಿಗಳು ಹಾನಿ ಮಾಡಿದ ಘಟನೆ ಬಂಟ್ವಾಳದ ಎಸ್ ವಿಎಸ್ ಕಾಲೇಜಿನ ಬಳಿ ಇರುವ ಮಂಡಾಡಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

10-12 ವರ್ಷಗಳಿಂದ ಈ ಕಟ್ಟೆ ಇದ್ದು, ಕಳೆದ ಕೆಲವು ದಿನಗಳ ಹಿಂದೆ ವಿಶ್ವ ಹಿಂದೂ ಪರಿಷತ್ ಮಂಡಾಡಿ ಶಾಖೆಯು ಈ ಕಟ್ಟೆಯನ್ನು ನವೀಕರಣಗೊಳಿಸಿತ್ತು. ಅದಕ್ಕೆ ಹನುಮಂತನ ಚಿತ್ರ, ಭಗವಾಧ್ವಜ ಅಳವಡಿಸಲಾಗಿತ್ತು. ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಕಟ್ಟೆಯನ್ನು ಒಡೆದುಹಾಕಿ, ಭಗವಾಧ್ವಜವನ್ನು ಕಿತ್ತೊಯ್ದಿದ್ದಾರೆ. ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ ಕಾರೊಂದು ಈ ದಾರಿಯಲ್ಲಿ ಸಂಚರಿಸಿದ್ದು , ಸಿಸಿಟಿವಿಯಲ್ಲಿ ದಾಖಲಾಗಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂಟ್ವಾಳ ವಿಹಿಂಪ ಜಿಲ್ಲಾ ಸಹಸಂಚಾಲಕ ಗುರುರಾಜ್ ಬಂಟ್ವಾಳ, ದೀಪಕ್ ಬಂಟ್ವಾಳ, ಸಂತೋಷ್ ಸರಪಾಡಿ, ಶಿವಪ್ರಸಾದ್ ತುಂಬೆ, ಅನಿಲ್ ಮಂಡಾಡಿ ದೂರು ನೀಡಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಸದ್ಯ ಪೊಲೀಸರು ಸ್ಥಳದಲ್ಲಿ ತನಿಖೆ ನಡೆಸುತ್ತಿದ್ದಾರೆ.

Leave A Reply