ಮಂಗಳೂರು : ರೈಲು ಡಿಕ್ಕಿ ಹೊಡೆದು ಮಹಿಳೆ ಗಂಭೀರ

Share the Article

ಮಂಗಳೂರು : ರೈಲು ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮುಲ್ಕಿಯ ರೈಲು ನಿಲ್ದಾಣದ ಬಳಿ ಶನಿವಾರ ನಡೆದಿದೆ.

ಇಬ್ರಾಹಿಂ ಎಂಬವರ ಪುತ್ರಿ ಸಕೀನಾ ಎಂಬವರು ಗಾಯಗೊಂಡ ಮಹಿಳೆ‌.

ಶನಿವಾರ ಬೆಳಗ್ಗೆ ಮುಲ್ಕಿ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ಸಕೀನಾ ಅವರನ್ನು ಸ್ಥಳೀಯರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಿಂದ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ರೈಲ್ವೆ ಇಲಾಖೆಯ ಪೊಲೀಸರು ಹಾಗೂ ಮುಲ್ಕಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply