ಪುತ್ತೂರಿನಲ್ಲಿ ಮಳೆನೀರಿನ ಸಂಗ್ರಹಣೆ, ಮರುಬಳಕೆ, ಸಂರಕ್ಷಣೆ, ತೆರೆದ ಕೊಳವೆ ಬಾವಿಗಳಲ್ಲಿ ಮಕ್ಕಳು ಬೀಳದಂತೆ ನಿಯಂತ್ರಿಸುವ ಅಂತರ್ಜಲ ಕಾರ್ಯಾಗಾರ
ಪುತ್ತೂರು : ಅಂತರ್ಜಲ ನಿರ್ದೇಶನಾಲಯ, ಬೆಂಗಳೂರು ಹಾಗೂ ಜಿಲ್ಲಾ ಅಂತರ್ಜಲ ಕಚೇರಿ, ಮಂಗಳೂರು, ಮಳೆನೀರಿನ ಸಂಗ್ರಹಣೆ ಮತ್ತು ಮರುಬಳಕೆ, ಅಂತರ್ಜಲ ಸಂರಕ್ಷಣೆ, ಕಲುಷಿತತೆ ತಡೆಗಟ್ಟುವಿಕೆ, ತೆರೆದ ಕೊಳವೆ ಬಾವಿಗಳಲ್ಲಿ ಚಿಕ್ಕ ಮಕ್ಕಳು ಬೀಳದಂತೆ ನಿಯಂತ್ರಿಸುವ ಹಾಗೂ ಅಂತರ್ಜಲ ಅಭಿವೃದ್ಧಿ, ಸದ್ಬಳಕೆ ಕುರಿತು 2019-20ನೇ ಸಾಲಿನ ಅಂತರ್ಜಲ ಕಾರ್ಯಾಗಾರ ಪುತ್ತೂರಿನ ತಾಲೂಕು ಪಂಚಾಯತ್ ಸಭಾಂಗಣ ದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಉದ್ಘಾಟಿಸಿದರು, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಲಲಿತಾ ಈಶ್ವರ್ ಕೈಪಿಡಿ ಬಿಡುಗಡೆ ಮಾಡಿದರು ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ರತ್ನಶ್ರೀ ಜೋಸೆಫ್ ಜಿ. ಯಂ. ರೆಬೆಲ್ಲೊ ಅಂತರ್ಜಲ ಕುರಿತು ಮಾಹಿತಿ ಯನ್ನು ನೀಡಿದರು.