ಪುನೀತ್ ರಾಜ್ ಕುಮಾರ್ ನಿಧನ | ಅಭಿಮಾನಿ ಹೃದಯಾಘಾತದಿಂದ ಸಾವು

Share the Article

ನಟ ಪುನೀತ್ ರಾಜ್‍ಕುಮಾರ್ ನಿಧನದ ಸುದ್ದಿ ಕೇಳಿ ಅಭಿಮಾನಿಯೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮರೂರು ಗ್ರಾಮದಲ್ಲಿ ಶುಕ್ರವಾರ ಜರುಗಿದೆ.

ತಾಲೂಕಿನ ಪೊನ್ನಾಚಿ ಸಮೀಪದ ಮರೂರು ಗ್ರಾಮದ ಮುನಿಯಪ್ಪ (30) ಎಂಬಾತನೇ ಮೃತ ದುರ್ದೈವಿಯಾಗಿದ್ದು, ಈತ ಬಾಲ್ಯದಿಂದಲೂ ಪುನೀತ್ ರಾಜ್‍ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದನು.

ಪುನೀತ್ ರಾಜ್ ಕುಮಾರ್ ಅವರ ಎಲ್ಲಾ ಚಿತ್ರಗಳನ್ನು ವೀಕ್ಷಿಸುತ್ತಿದ್ದನು. ಇಂದು ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಪುನೀತ್ ರಾಜ್‍ಕುಮಾರ್ ನಿಧನದ ಸುದ್ದಿ ತಿಳಿದು ಸ್ಥಳದಲ್ಲಿಯೇ ಕುಸಿದುಬಿದ್ದಿದ್ದಾನೆ. ಕೂಡಲೇ ಗ್ರಾಮಸ್ಥರು ಚಿಕಿತ್ಸೆಗಾಗಿ ಮರೂರು ಗ್ರಾಮದಿಂದ ಪೊನ್ನಾಚಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರುವ ಮಾರ್ಗಮಧ್ಯೆದಲ್ಲಿಯೇ ಮೃತಪಟ್ಟಿದ್ದಾನೆ.

ಮೃತ ಮುನಿಸ್ವಾಮಿ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾನೆ. ಮುನಿಯಪ್ಪನ ಅಗಲಿಕೆಗೆ ಆತನ ಸ್ನೇಹಿತರು, ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

Leave A Reply