ಕತಾರ್ ಕರ್ನಾಟಕ ಸಂಘದ ಅಧ್ಯಕ್ಷ ನಾಗೇಶ್ ರಾವ್ ನಿಧನ

Share the Article

ಉಡುಪಿ : ಕತಾರ್ ಕರ್ನಾಟಕ ಸಂಘದ ಅಧ್ಯಕ್ಷ ನಾಗೇಶ್ ರಾವ್ ಕತಾರ್ ದೋಹಾದಲ್ಲಿರುವ ತಮ್ಮ ನಿವಾಸದಲ್ಲಿ ಅ.28ರ ಗುರುವಾರ ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ ಅನುರಾಧ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಕಳೆದ ಸುಮಾರು ಮೂರು ದಶಕಗಳಿಂದ ಕತಾರಿನಲ್ಲಿ ನೆಲೆಸಿರುವ ನಾಗೇಶ್ ರಾವ್ ಅಲ್ಲಿನ ಔಷಧಿ ಸಂಸ್ಥೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸಮಾಜ ಸೇವೆಯಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ರಾವ್, ಕತಾರ್ ಕರ್ನಾಟಕ ಸಂಘದ ಉಗಮದ ದಿನದಿಂದಲೂ ವಿವಿಧ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಖಜಾಂಚಿ, ಕಾರ್ಯದರ್ಶಿ ಹಾಗು ಜನವರಿ 2019ರಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತಿದ್ದರು.

Leave A Reply