ಶಾರ್ಟ್ ಸರ್ಕ್ಯೂಟ್: ಚಲಿಸುತ್ತಿದ್ದ ಬಸ್‌ನಲ್ಲಿ ಕಾಣಿಸಿಕೊಂಡ ದಟ್ಟ ಹೊಗೆ

Share the Article

ಉಡುಪಿ : ಚಲಿಸುತ್ತಿದ್ದ ಬಸ್ ನಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಬಸ್‌ನ ಪೂರ್ತಿ ದಟ್ಟ ಹೊಗೆ ಕಾಣಿಸಿಕೊಂಡ ಘಟ‌ನೆ ಕುಂದಾಪುರ – ಬೈಂದೂರು ರಾ.ಹೆ. 66ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.

ಬಸ್ ನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಹಾಗೂ ನಿರ್ವಾಹಕರು ಪ್ರಯಾಣಿಕರನ್ನು ಕೆಳಗಿಸಿ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹೆಚ್ಚಿನ ಅವಘಢ ಸಂಭವಿಸಿದ್ದನ್ನು ತಪ್ಪಿಸಿದ್ದಾರೆ.

ಬಸ್ ಬೈಂದೂರು ಕಡೆಯಿಂದ ಕುಂದಾಪುರಕ್ಕೆ ಸಂಚರಿಸುತ್ತಿತ್ತು ಎಂದು ತಿಳಿದು ಬಂದಿದೆ.

Leave A Reply