ಬೆಳ್ತಂಗಡಿ | ಮುಂಡಾಜೆಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸರ ದಾಳಿ, ಎರಡು ಟಿಪ್ಪರ್ ಹಾಗೂ ದೋಣಿ ವಶಕ್ಕೆ

Share the Article

ಮರಳುಗಾರಿಗೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬಂಟ್ವಾಳ ಎಎಸ್ಪಿ ಮತ್ತು ತಂಡ ಇಂದು ಬೆಳಗ್ಗಿನ ಜಾವ ಮಾರುವೇಷದಲ್ಲಿ ಏಕಾಏಕಿ ದಾಳಿ ನಡೆಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮುಂಡಾಜೆ ಗ್ರಾಮದ ಹೊಸಕಾಪು ಎಂಬಲ್ಲಿ ನಡೆದಿದೆ.

ದಾಳಿ ವೇಳೆ ಮರಳುಗಾರಿಕೆಗೆ ಬಳಸುತ್ತಿದ್ದ ಎರಡು ದೋಣಿ ಹಾಗೂ ಎರಡು ಟಿಪ್ಪರ್ ವಾಹನವನ್ನು ವಶಪಡಿಸಿಕೊಂಡು ಧರ್ಮಸ್ಥಳ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಟಿಪ್ಪರ್ ವಾಹನ ಉಜಿರೆ ಮತ್ತು ಸೋಮಂತ್ತಡ್ಕದ ನಿವಾಸಿಗಳಿಗೆ ಸೇರಿದ್ದು ಎಂದು ತಿಳಿದುಬಂದಿದೆ.

ಎರಡು ಕಡೆ ದಾಳಿ ನಡೆದಿದ್ದು, ಈ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.

Leave A Reply