Home News ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆಯ ಅಬ್ಬರ | ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆಯ ಅಬ್ಬರ | ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ

Hindu neighbor gifts plot of land

Hindu neighbour gifts land to Muslim journalist

ಕರ್ನಾಟಕದಲ್ಲಿ ಹಿಂಗಾರು ಮಳೆಯ ಜೊತೆಗೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 6ರವರೆಗೂ ಗುಡುಗು ಸಹಿತ ಭಾರೀ ಮಳೆಯಾಗಲಿದೆ.

ಕರಾವಳಿ, ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ನಾಳೆ ಹಳದಿ ಅಲರ್ಟ್‌ ಘೋಷಿಸಲಾಗಿದ್ದು, ಇಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್‌ ಘೋಷಿಸಲಾಗಿದೆ. ಇಂದು ಮಲೆನಾಡಿನ ಜಿಲ್ಲೆಗಳ ಜತೆಗೆ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ ಜಿಲ್ಲೆಗಳಲ್ಲೂ ಹಳದಿ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇಂದಿನಿಂದ 3 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕನ್ಯಾಕುಮಾರಿ ಮತ್ತು ಶ್ರೀಲಂಕಾ ಕರಾವಳಿಯ ಉತ್ತರ ಭಾಗದಲ್ಲಿ ಕಡಿಮೆ ಒತ್ತಡದ ಪ್ರದೇಶವಿದೆ. ದಕ್ಷಿಣ ಒಳನಾಡು ಮತ್ತು ತಮಿಳುನಾಡಿನ ಕರಾವಳಿ, ಪುದುಚೇರಿ ಮತ್ತು ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರ್ನಾಟಕ, ಲಕ್ಷದ್ವೀಪ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲೂ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಇಂದು ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗುವುದರಿಂದ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಕೂಡ ನವೆಂಬರ್ 6ರವರೆಗೆ ಮಳೆ ಹೆಚ್ಚಾಗಲಿದೆ.