ಹಟ್ಟಿ ಚಿನ್ನದ ಗಣಿಯಲ್ಲಿ ಅಗ್ನಿ ಅವಘಡ ,ಬೆಂಕಿ ನಂದಿಸಲು ಹರ ಸಾಹಸ

Share the Article

ರಾಯಚೂರಿನ ಹಟ್ಟಿ ಚಿನ್ನದ ಗಣಿಯ ಸ್ಕ್ರ್ಯಾಪ್ ಯಾರ್ಡ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದ ವಾಯು ಮಾಲಿನ್ಯ ಉಂಟಾಗಿದೆ. ಯಾರ್ಡ್ ನಲ್ಲಿ ಸುಮಾರು 500ಕ್ಕೂ ಅಧಿಕ ಹಳೆಯ ಟಯರ್ ಗಳನ್ನು ಸಂಗ್ರಹಿಸಿಡಲಾಗಿತ್ತು.

ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಕಳೆದ ಎರಡು ಗಂಟೆಯಿಂದ ಹೊತ್ತಿ ಉರಿಯುತ್ತಿದೆ. ಅಗ್ನಿ ಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರೂ ಸಕಾಲಕ್ಕೆ ಬಂದಿಲ್ಲ. ಹೀಗಾಗಿ ಹಟ್ಟಿ ಚಿನ್ನದ ಗಣಿ ಕಾರ್ಮಿಕರೆ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು.

ಸ್ಥಳದಲ್ಲಿ ಭಾರೀ ಪ್ರಮಾಣದ ಹೊಗೆ ಹೊರಸೂಸುತ್ತಿದ್ದು, ಸುತ್ತಲಿನ ನಿವಾಸಿಗಳು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಸುಮಾರು ಐದರಿಂದ ಆರು ಕಿಮೀ ದೂರದವರೆಗೂ ಬೆಂಕಿ ಹೊತ್ತಿಕೊಂಡಿರುವುದು ಕಾಣಿಸುತ್ತಿದೆ. ಅಲ್ಲದೆ, ಪಕ್ಕದಲ್ಲೇ ಮದ್ದುಗುಂಡುಗಳನ್ನು ಸಂಗ್ರಹಿಸಿದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿದೆ.

Leave A Reply