ಚುನಾವಣಾ ನೀತಿ ಸಂಹಿತೆ ಜಾರಿ!!ನಾಳೆಯಿಂದ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಯಲಿದ್ದ ಉದ್ಯೋಗ ಮೇಳ ಕಾರ್ಯಕ್ರಮ ಮುಂದೂಡಿದ ಆಯೋಜಕರು

Share the Article

ಮಂಗಳೂರು ವಿಶ್ವವಿದ್ಯಾನಿಯದಲ್ಲಿ ಉದ್ಯೋಗ ಮಾಹಿತಿ ಮಾರ್ಗದರ್ಶಕ ಕೇಂದ್ರ ಹಾಗೂ ತರಬೇತಿ ಉದ್ಯೋಗ ಕೋಶ ಮಂಗಳ ಗಂಗೋತ್ರಿಯ ಜಂಟಿ ಆಶ್ರಯದಲ್ಲಿ ದಿನಾಂಕ 16 ಮತ್ತು 17 ರಂದು ಆಯೋಜಿಸಿದ್ದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದಾಗಿ ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರ ಸೂಚನೆಯ ಮೇರೆಗೆ ಉದ್ಯೋಗ ಮೇಳ ನಡೆಸಲು ನಿರ್ಧರಿಸಿದ್ದ ಎಲ್ಲಾ ಸಿದ್ಧತೆಗಳನ್ನು ಸದ್ಯದಿಂದಲೇ ಕೈಬಿಡಲಾಗಿದೆ.

ಚುನಾವಣಾ ನೀತಿ ಸಂಹಿತೆ ಸಡಿಲವಾದ ಬಳಿಕ ಮುಂದಿನ ಕಾರ್ಯಕ್ರಮದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

Leave A Reply