ಇ-ಕಾಮರ್ಸ್ ದೈತ್ಯ ಅಮೆಜಾನ್ ನಲ್ಲಿ ಡ್ರಗ್ಸ್ ಮಾರಾಟ!! | ಸಿಹಿ ತುಳಸಿ ನೆಪದಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ಬೆಳಕಿಗೆ

Share the Article

ಇ-ಕಾಮರ್ಸ್‌ ದೈತ್ಯ ಅಮೆಜಾನ್‌ ಅನ್ನು ಬಳಸಿಕೊಂಡು ಮಧುಮೇಹಿಗಳಿಗೆ ಅನುಕೂಲವಾಗುವ ಸಿಹಿ ತುಳಸಿ ನೆಪದಲ್ಲಿ ಮರಿಜುವಾನಾ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ವಿಚಾರಣೆಗಾಗಿ ಮಧ್ಯಪ್ರದೇಶ ಪೊಲೀಸರು ಅಮೆಜಾನ್‌ಗೆ ನೋಟಿಸ್‌ ರವಾನಿಸಿದ್ದಾರೆ.

ಈಗಾಗಲೇ ಅಮೆಜಾನ್‍ಗೆ ನೋಟಿಸ್ ನೀಡಿದ್ದು, ಇಂದು ವಿಚಾರಣೆ ನಡೆಯಲಿದೆ. ಈವರೆಗೆ ಕೆಲವು ಪಾರ್ಸಲ್ ಕಂಪನಿಗಳನ್ನು ಬಳಸಿಕೊಂಡು ಡ್ರಗ್ಸ್ ಪೂರೈಸುತ್ತಿದ್ದ ಪ್ರಕರಣಗಳು ವರದಿಯಾಗುತ್ತಿದ್ದವು. ಆದರೆ ಈಗ ಅಮೆಜಾನ್ ನಂಥ ಕಂಪನಿ ಮೇಲೆ ಇಂಥ ಆರೋಪ ಕೇಳಿಬಂದಿರುವುದು ಸಂಚಲ ಮೂಡಿಸಿದೆ

ವಿಶಾಖಪಟ್ಟಣದ ಕಂಪನಿಯೊಂದು ಸಿಹಿ ತುಳಸಿ (ಸ್ವೀವಿಯಾ) ಎಲೆಗಳ ಉತ್ಪನ್ನ ಮಾರಾಟ ಕಂಪನಿ ಎಂದು ಹೇಳಿಕೊಂಡಿತ್ತು. ಅಮೆಜಾನ್‍ನಲ್ಲಿ ತನ್ನನ್ನು ತಾನೂ ನೋಂದಾಯಿಸಿಕೊಂಡಿತ್ತು. ಆದರೆ ಈ ಸಿಹಿ ತುಳಸಿ ನೆಪದಲ್ಲಿ ಪಾರ್ಸಲ್‍ನಲ್ಲಿ ಡ್ರಗ್ಸ್ ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ

ಈ ವಿಚಾರವಾಗಿ ಭಾನುವಾರ 20 ಕೆ.ಜಿ ಗಾಂಜಾ ಹೊಂದಿದ್ದ ಇಬ್ಬರನ್ನು ಪೊಲೀಸರು ಪಧ್ಯಪ್ರದೇಶದಲ್ಲಿ ಬಂಧಿಸಿದ್ದರು. ಅವರು ಅಮೆಜಾನ್ ಇಂಡಿಯಾ ವೆಬ್‍ಸೈಟ್ ಬಳಸಿ ಮಾದಕ ವಸ್ತು ಆರ್ಡರ್ ಮಾಡುತ್ತಿದ್ದರು ಮತ್ತು ದೇಶದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತಿದ್ದರು ಎಂಬುದು ತನಿಖೆಯಲ್ಲಿ ತಿಳಿದು ಬಂದಿದೆ.

ಅದಲ್ಲದೆ ಅಮೆಜಾನ್ ಮೂಲಕ 1000 ಕೆ.ಜಿ ನಿಷೇಧಿತ ಗಾಂಜಾವನ್ನು 1.10 ಕೋಟಿಗೆ ಮಾರಾಟ ಮಾಡಲಾಗಿದೆ ಎಂಬ ಇದೀಗ ಆರೋಪ ಕೇಳಿಬಂದಿದೆ. ಈ ಸಂಬಂಧ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಅಮೆಜಾನ್‌ ಅಧಿಕಾರಿ ವರ್ಗಕ್ಕೆ ಸೂಚಿಸಲಾಗಿದೆ. ಈ ಸಂದರ್ಭದಲ್ಲಿ ಅಮೆಜಾನ್‌ ಪರ ವಕೀಲರೂ ಹಾಜರಾಗುವ ನಿರೀಕ್ಷೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ನಿಷೇಧಿತ ವಸ್ತುಗಳನ್ನು ಮಾರಾಟ ಮಾಡಲು ನಾವು ಅವಕಾಶ ನೀಡುವುದಿಲ್ಲ. ಕಂಪನಿಯು ತನಿಖೆಗೆ ಸಹಕರಿಸಲಿದೆ’ ಎಂದು ಅಮೆಜಾನ್‌ ವಕ್ತಾರರು ತಿಳಿಸಿದ್ದಾರೆ. ಈ ನಡುವೆ ತನಿಖೆಯ ಭಾಗವಾಗಿ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಅಮೆಜಾನ್‌ ಡೆಲಿವರಿ ಕೇಂದ್ರಗಳಿಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply