ಭಾನುವಾರ, 25 ಅಕ್ಟೋಬರ್ 2026
Trending

ಬಂಟ್ವಾಳ: ಶಾಲಾ ಬಸ್‌ ಮೇಲೆ ಉರುಳಿದ ಮರ-ಮೂವರಿಗೆ ಗಂಭೀರ ಗಾಯ

ಮಂಗಳೂರು; ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಸಮೀಪ ಖಾಸಗಿ ಶಾಲೆಯ ಬಸ್‌ ಮೇಲೆ ಬೃಹತ್‌ ಗಾತ್ರದ ಮರ ಉರುಳಿಬಿದ್ದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ. ಈ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದ್ದು, ಓರ್ವ ಸ್ಥಿತಿ ಚಿಂತಾಜನಕವಾಗಿದೆ.

Sponsored

ಕಲ್ಲಡ್ಕದ ಖಾಸಗಿ ಶಾಲೆಗೆ ಸೇರಿದ ಬಸ್‌ ವಿದ್ಯಾರ್ಥಿಗಳನ್ನು ಕರೆದುಕೊಂಡು ಸಂಚರಿಸುತ್ತಿದ್ದ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿದ್ದ ಬೃಹತ್‌ ಮರ ಏಕಾಏಕಿ ಬಸ್‌ ಮೇಲೆ ಉರುಳಿದೆ. ಮರ ಬಿದ್ದ ರಭಸಕ್ಕೆ ಬಸ್‌ನ ಮೇಲ್ಭಾಗಕ್ಕೆ ಹಾನಿಯಾಗಿದ್ದು, ಒಳಗಿದ್ದ ವಿದ್ಯಾರ್ಥಿಗಳಲ್ಲಿ ಮೂವರಿಗೆ ಗಂಭೀರ ಗಾಯವಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಬಸ್ಸಿನಲ್ಲಿ ಒಟ್ಟು 32 ವಿದ್ಯಾರ್ಥಿಗಳು ಸಂಚರಿಸುತ್ತಿದ್ದು, ಈ ಪೈಕಿ ಕೆಲವರನ್ನು ಡ್ರಾಪ್‌ ಮಾಡಲಾಗಿದ್ದು, ಅಪಘಾತದ ವೇಳೆ ಬಸ್ಸಿನಲ್ಲಿ ಅಂದಾಜು 25 ಮಂದಿ ವಿದ್ಯಾರ್ಥಿಗಳು ಇದ್ದ ಕುರಿತು ಶಂಕೆ ವ್ಯಕ್ತವಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಸ್ಥಳೀಯರು ಮರವನ್ನು ತೆರವು ಮಾಡಿ ಗಾಯಾಳುಗಳನ್ನು ಮಂಗಳೂರು ಸಹಿತ ವಿವಿಧ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗಾಯಾಳುಗಳ ತೀವ್ರತೆ ಕುರಿತು ಅಧಿಕೃತ ಮಾಹಿತಿ ಲಭ್ಯವಾಗಬೇಕಷ್ಟೇ.