ಬೆಳ್ತಂಗಡಿ: ಚಾರ್ಮಾಡಿ ಸಮೀಪದ ಚಿಬಿದ್ರೆ ಎಂಬಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಚಾರ್ಮಾಡಿ ಮುಗುಳಿದಡ್ಡ ನಿವಾಸಿ ದಯಾನಂದ ಗೌಡ (45) ಮೃತ ವ್ಯಕ್ತಿ.
ಸೆ.3 ರ ರಾತ್ರಿಯ ವೇಳೆ ಈ ಅವಘಡ ಸಂಭವಿಸಿದೆ. ತರಕಾರಿ ತುಂಬಿಕೊಂಡು ಬರುತ್ತಿದ್ದ ಈಚರ್ ಲಾರಿಗೆ ಇವರು ಚಲಾಯಿಸುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ದಯಾನಂದ ಗೌಡ ಅವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿದಿದೆ.

