ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಜೂ.26 (ಇಂದು) ರಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ನಡೆದಿದೆ.
ಮುಂಜಾನೆ ಸುಲ್ಕೇರಿ ಗ್ರಾಮದ ರಸ್ತೆಯಲ್ಲಿ ಬಿಳಿ ಬಣ್ಣದ ಮಾರುತಿ ಸುಜುಕಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾಂಕ್ರೀಟ್ ಕಂಬ ಮುರಿದು ಕಾರಿನ ಮೇಲೆಯೇ ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಾನೆಟ್, ಬಂಪರ್, ಇಂಜಿನ್ ಭಾಗ ಸಂಪೂರ್ಣ ಜಖಂಗೊಂಡಿದೆ.
ಅಪಘಾತದಿಂದ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯಲ್ಲಿ ಬಿದ್ದಿದೆ. ಸ್ಥಳದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಮೆಸ್ಕಾಂ ಸಿಬ್ಬಂದಿ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿಯ ಕುರಿತು ಪೊಲೀಸರಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.
ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.




