Home Accident Bengaluru: ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಾಯ

Bengaluru: ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಾಯ

Hindu neighbor gifts plot of land

Hindu neighbour gifts land to Muslim journalist

Bengaluru: ಪಿಜಿಯೊಂದರಲ್ಲಿ ಸಿಲಿಂಡರ್‌ ಸ್ಫೋಟಗೊಂಡು (Cylinder Explosion) ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಕುಂದಲಹಳ್ಳಿಯಲ್ಲಿ ನಡೆದಿದೆ.

ಸೆವೆನ್ ಹಿಲ್ಸ್ ಕೋ‌ಲಿವಿಂಗ್ ಪಿಜಿಯಲ್ಲಿ (Boys PG) ಘಟನೆ ನಡೆದಿದ್ದು, ಬಳ್ಳಾರಿ ಮೂಲದ ಅರವಿಂದ್ ಎಂಬುವವರು ಸಾವನ್ನಪ್ಪಿದ್ದಾರೆ. ವೆಂಕಟೇಶ್ (28), ವಿಶಾಲ್ (23), ಗೋಯಲ್ (25), ಎಂಬುವವರು ಗಾಯಗೊಂಡಿದ್ದಾರೆ.

ಪ್ರಾಥಮಿಕ ಮೂಲಗಳ ಪ್ರಕಾರ, ಪಿಜಿಯ ಕೆಳಮಹಡಿಯಲ್ಲಿದ್ದ ಅಡುಗೆ ಕೋಣೆಯಲ್ಲಿ ಅನಿಲ ಸೋರಿಕೆಯಾಗಿ ಸಿಲಿಂಡರ್‌ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಘಟನಾ ಸ್ಥಳ ಪರಿಶೀಲಿಸಿರುವ ಪೊಲೀಸರು ಮೃತದೇಹ ಅರವಿಂದ್‌ ಶವವನ್ನ ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಬಳಿಕ ಪಿಜಿಯಲ್ಲಿದ್ದ ಇತರರನ್ನ ಬೇರೆ ಬೇರೆ ಪಿಜಿಗಳಿಗೆ ಶಿಫ್ಟ್ ಮಾಡಿಸಿದ್ದಾರೆ. ಈ ಬೆನ್ನಲ್ಲೇ ಘಟನಾ ಸ್ಥಳಕ್ಕೆ ಜಿಬಿಎ ಅಧಿಕಾರಿಗಳು ಹಾಗೂ ಪೋರ್ವ ನಗರಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.