Home Accident Chitradurga Bus Accident: PNRF ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ: ಮೋದಿ ಸಂತಾಪ

Chitradurga Bus Accident: PNRF ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ: ಮೋದಿ ಸಂತಾಪ

Hindu neighbor gifts plot of land

Hindu neighbour gifts land to Muslim journalist

Chitradurga Bus Accident: ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (PNRF) 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಪ್ರಧಾನಿ ಮೋದಿ (PM Narendra Modi) ಹೇಳಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು ಕರ್ನಾಟಕದ ಚಿತ್ರದುರ್ಗ (Chitradurga) ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಬರೆದುಕೊಂಡಿದ್ದಾರೆ.