134
ಕೊಕ್ಕಡ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಸೆ.12 (ಇಂದು) ನಡೆದಿದೆ. ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಟಾಟಾ ಸಫಾರಿ ಹೋಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಕೆಎಸ್‌ಆರ್‌ಟಿಸಿ ಬಸ್ ಬರುತ್ತಿದ್ದು, ಇದರ ನಡುವೆ ಭೀಕರ ಅಪಘಾತ ಕೊಕ್ಕಡ ಸಮೀಪ ನಡೆದಿದೆ.


ಅಪಘಾತದ ತೀವ್ರತೆಗೆ ಬಸ್ ಮತ್ತು ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವುದಾಗಿ ವರದಿಯಾಗಿದೆ. ಕಾರು ಚಾಲಕನ ಕೈ ಮುರಿತ ಉಂಟಾಗಿದ್ದು, ಕೆಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿರುವುದಾಗಿ ವರದಿಯಾಗಿದೆ.