ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ರಮಾನಾಥ ರೈ ಪ್ರಯಾಣ ಮಾಡುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಭಾನುವಾರ (ಸೆ.20) ಕಾರ್ಕಳ ಮೂಡಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ನಡೆದಿದೆ.
Sponsoredಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ರಮಾನಾಥ ರೈ ಪ್ರಯಾಣ ಮಾಡುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಅಪಘಾತದ ತೀವ್ರತೆ ನಜ್ಜುಗುಜ್ಜಾಗಿದೆ.
ರಮಾನಾಥ ರೈ ಅವರು ಅಪಾಯದಿಂದ ಪಾರಾಗಿದ್ದು, ಆದರೆ ಕಾರು ಚಾಲಕ, ಆಪ್ತ ಸಹಾಯಕ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಸ್ಸು, ಕಾರಿನಲ್ಲಿದ್ದ ಗಾಯಾಳುಗಳನ್ನು ಸ್ಥಳೀಯರು ವಾಹನದಿಂದ ಹೊರಗೆ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗಾಯಾಳುಗಳ ಸ್ಥಿತಿ ಹಾಗೂ ಅಪಘಾತಕ್ಕೆ ಕಾರಣವೇನು ಎಂದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.




