Home » ತಿಮ್ಮಪ್ಪನ ದರ್ಶನ ಪಡೆದು ವಾಪಸ್ಸಾಗ್ತಿದ್ದ ಒಂದೇ ಕುಟುಂಬದ ನಾಲ್ವರು ಸಾವು

ತಿಮ್ಮಪ್ಪನ ದರ್ಶನ ಪಡೆದು ವಾಪಸ್ಸಾಗ್ತಿದ್ದ ಒಂದೇ ಕುಟುಂಬದ ನಾಲ್ವರು ಸಾವು

0 comments

ಕೋಲಾರ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವಿಗೀಡಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್‌ ತಾಲ್ಲೂಕಿನ ದೊಡ್ಡಕಾರಿ ಬಳಿ ನಡೆದಿದೆ.

ಬೆಂಗಳೂರಿನ ವಿದ್ಯಾರಣ್ಯಪುರ ಮೂಲದ ಶಾರದಮ್ಮ (70), ದೀಕ್ಷಿತ (25), ದೇವೇಂದ್ರ ಕುಮಾರ್‌ (41), ಜಿಷ್ಣು (13) ಮೃತರು.

ಕುಟುಂಬದವರು ಸೇರಿಕೊಂಡು ತಿರುಪತಿಗೆ ತೆರಳಿದ್ದು ತಿಮ್ಮಪ್ಪನ ದರ್ಶನ ಪಡೆದು ಬೆಂಗಳೂರಿನ ವಾಪಾಸು ಆಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ನಡೆದಿದೆ. ಈ ವೇಳೆ ಟೊಯೋಟಾ ರಿಯಾನ್‌ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ನಾಲ್ವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಇನ್ನುಳಿದಂತೆ ವಿಕಾಸ್‌, ನೀತು, ಆದ್ವಿಕ ಮೂವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಬಂಗಾರಪೇಟೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇತಮಂಗಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

You may also like