ಶನಿವಾರ, 24 ಅಕ್ಟೋಬರ್ 2026

ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸಾವು

ಹೆಬ್ರಿ: ಹೆಬ್ರಿಯಿಂದ ಬ್ರಹ್ಮಾವರ ಮಾರ್ಗವಾಗಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರವೊಂದು ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಆ.7 ರ ಶುಕ್ರವಾರ ಸಂಜೆ 5.30ರ ಸುಮಾರಿಗೆ ಸಂಭವಿಸಿದೆ ಎನ್ನಲಾಗಿದೆ.

ಬೃಹತ್‌ ಮರ ರಸ್ತೆಗೆ ಉರುಳಿ ಬೀಳುವ ಸಂದರ್ಭ ವಿದ್ಯುತ್‌ ಕಂಬ ಹಾಗೂ ತಂತಿಗಳೂ ಮರದೊಂದಿಗೆ ಕಾರಿನ ಮೇಲೆ ಬಿದ್ದಿದೆ. ಇದರಿಂದ ಕಾರು, ಮರ, ವಿದ್ಯುತ್‌ ಕಂಬ ಹಾಗೂ ತಂತಿಗಳ ನಡುವೆ ಸಿಲುಕಿ, ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮರ ಹಾಗೂ ವಿದ್ಯುತ್‌ ಕಂಬ ತೆರವು ಕಾರ್ಯಾಚರಣೆ ನಡೆಯುತ್ತಿದೆ, ಮೃತಪಟ್ಟ ಚಾಲಕನ ಗುರುತು ಇನ್ನಷ್ಟೇ ತಿಳಿದು ಬರಬೇಕಿದೆ.