Karnool Bus Fire: ಕರ್ನೂಲ್ ಬಸ್ ದುರಂತ: ಮೃತರಿಗೆ ತಲಾ 5 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಣೆ
Karnool Bus Fire: ಆಂಧ್ರದ ಕರ್ನೂಲಿನಲ್ಲಿ (Karnool) ಗುರುವಾರ (ಅ.23) ಮಧ್ಯರಾತ್ರಿ 3ರ ಸುಮಾರಿಗೆ ಹೈದರಾಬಾದ್ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಬಸ್ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದು, 24 ಜನರು ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಈ ಕುರಿತು ಪಿಎಂ ಕಚೇರಿ (PMO) ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪಿಎಂ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ.
Sponsoredಈ ಕುರಿತು ಆಂಧ್ರಪ್ರದೇಶ ಸಾರಿಗೆ ಸಚಿವ ರಾಮ್ ಪ್ರಸಾದ್ ರೆಡ್ಡಿ (Ram Prasad Reddy) ಮಾತನಾಡಿ, ಇದು ಹಳೆಯ ಬಸ್ ಆಗಿದ್ದ ಕಾರಣ ಇದರಲ್ಲಿ ಸ್ವಯಂಚಾಲಿತ ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆ ಇರಲಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.




