ಭಾನುವಾರ, 25 ಅಕ್ಟೋಬರ್ 2026

ಮಚ್ಚಿನ: ಭೀಕರ ರಸ್ತೆ ಅಪಘಾತ – ಪಿಕಪ್ ಹಾಗೂ ಆಕ್ಟಿವಾ ಡಿಕ್ಕಿಯಾಗಿ ಇಬ್ಬರು ಸಾವು

ಮಚ್ಚಿನ: ಬಳ್ಳಮಂಜ – ಪಣಕಜೆ ರಸ್ತೆಯ ಪಾಲ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾದ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

Sponsored

ಅಪಘಾತದಲ್ಲಿ ಆಕ್ಟಿವಾ ಹಿಂಬದಿ ಸವಾರ ಚಂದಪ್ಪ ಮೂಲ್ಯ ಅವರು ತಲೆಗೆ ಮತ್ತು ದೇಹಕ್ಕೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಮೃತಪಟ್ಟಿದ್ದಾರೆ.

Marriage AdMarriage AdSponsored

ಮಡಂತ್ಯಾರಿನ ‘ಎಸ್.ಎಂ ಶಾಮಿಯಾನ’ ಸಂಸ್ಥೆಗೆ ಸೇರಿದ ಪಿಕಪ್ ವಾಹನವು ಬಳ್ಳಮಂಜ ಕಡೆಯಿಂದ ಪಣಕಜೆ ಕಡೆಗೆ ತೆರಳುತ್ತಿತ್ತು. ಈ ವೇಳೆ ಪಣಕಜೆಯಿಂದ ಬಳ್ಳಮಂಜ ಕಡೆಗೆ ಬರುತ್ತಿದ್ದ ಆಕ್ಟಿವಾ ಸ್ಕೂಟರ್‌ಗೆ ಪಾಲ್ಯರ ಬಳಿ ಪಿಕಪ್ ವಾಹನವು ನೇರ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಆಕ್ಟಿವಾ ಸವಾರ ಡಾಕಯ್ಯ ಗೌಡ ಅವರಿಗೂ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿ ಆಗದೆ ಇವರೂ ಮೃತ ಪಟ್ಟಿದ್ದಾರೆ.