# ಮದ್ದಡ್ಕದಲ್ಲಿ ಅಪಘಾತ: ಕಾರು-ಬೈಕ್‌ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

- Link: https://hosakannada.com/accident/maddadka-car-bike-accident/
- Published: 2026-06-11T20:20:00+00:00
- Author: ಹೊಸಕನ್ನಡ ನ್ಯೂಸ್

ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಮಸೀದಿ ಬಳಿ (ಜೂನ್ 11 ರಂದು ಕಾರು ಮತ್ತು ಬೈಕ್
ನಡುವೆ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರಿನ
ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Sponsored

ಕಾರು ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿತ್ತು. ಈ ವೇಳೆ ಬೈಕ್ ಸವಾರ ತನ್ನ ಮನೆಯಿಂದ
ಹೊರಟು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಕಾರು ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ
ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳೀಯರು ತಕ್ಷಣವೇ ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲು ವ್ಯವಸ್ಥೆ ಮಾಡಿದ್ದಾರೆ.

Advertisement

Advertisement

Advertisement
