ಆಂಧ್ರಪ್ರದೇಶದ HPCL ತೈಲ ಸಂಸ್ಕರಣಾಗಾರದಲ್ಲಿ ಭಾರಿ ಅಗ್ನಿ ಅವಘಡ

ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಹೆಚ್‌ಪಿಸಿಎಲ್) ತೈಲ ಸಂಸ್ಕರಣಾಗಾರದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸೋಮವಾರ ರಾತ್ರಿ ಸುಮಾರು 9:50 ರ ಸುಮಾರಿಗೆ ಈ ಅಗ್ನಿ ಅವಘಡ ಸಂಭವಿಸಿದೆ. ಸಂಸ್ಕರಣಾಗಾರದಲ್ಲಿ ಮೊದಲು ಸಣ್ಣ ಮಟ್ಟದ ಸ್ಫೋಡದಂತಹ ಶಬ್ದ ಕೇಳಿಸಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿಯಜ್ವಾಲೆಗಳು ಉಂಟಾಗಿ, ಆಕಾಶದಲ್ಲಿ ದಟ್ಟವಾದ ಕಪ್ಪು ಹೊಗೆ ಆವರಿಸಿಕೊಂಡಿತು.
Sponsoredಕಾರ್ಖಾನೆಯಿಂದ ಹೊರಬಂದ ದಟ್ಟವಾದ ಕಪ್ಪು ಹೊಗೆಯು ಮಲ್ಕಾಪುರಂ ಮತ್ತು ಶ್ರೀಹರಿಪುರಂ ಸೇರಿದಂತೆ ಸುತ್ತಮುತ್ತಲಿನ ವಸತಿ ಪ್ರದೇಶಗಳಿಗೆ ಆವರಿಸಿದ್ದರಿಂದ ಸ್ಥಳೀಯ ನಿವಾಸಿಗಳು ಆತಂಕಗೊಂಡು ರಸ್ತೆಗಿಳಿದಿದ್ದರು. ಎಚ್‌ಪಿಸಿಎಲ್ ಮತ್ತು ಸ್ಥಳೀಯ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಎಚ್ಚೆತ್ತುಕೊಂಡು ಸಕಾಲದಲ್ಲಿ ತ್ವರಿತ ಕಾರ್ಯಾಚರಣೆ ನಡೆಸಿದ್ದರಿಂದ ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಯಾರಿಗೂ ಗಾಯಗಳಾಗಿರುವ ಕುರಿತು ವರದಿಯಾಗಿಲ್ಲ.
ಅಗ್ನಿಶಾಮಕ ಸಿಬ್ಬಂದಿಯ ಸಮಯೋಚಿತ ಕ್ರಮದಿಂದ ಬೆಂಕಿಯನ್ನು ಯಶಸ್ವಿಯಾಗಿಹತೋಟಿಗೆ ತರಲಾಗಿದೆ. ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಸಲ್ಫರ್ ಪಿಚ್ ಟ್ಯಾಂಕ್ ಬಳಿ ಈ ಅವಘಡ ಸಂಭವಿಸಿದ್ದು, ಬೆಂಕಿ ಹತ್ತಿಕೊಳ್ಳಲು ನಿಖರವಾದ ಕಾರಣವೇನು ಎಂಬುದರ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮತ್ತು ತಜ್ಞರ ತಂಡವು ತನಿಖೆಯನ್ನು ಮುಂದುವರೆಸಿದೆ.




