ಭಾನುವಾರ, 25 ಅಕ್ಟೋಬರ್ 2026
Trending

ಮಂಗಳೂರು: ಕುತ್ತಾರಿನಲ್ಲಿ ಪಾದಾಚಾರಿಗೆ ಡಿಕ್ಕಿ ಹೊಡೆದ ಬೈಕ್‌: ಪಾದಾಚಾರಿ ವ್ಯಕ್ತಿ ದಾರುಣ ಸಾವು

ಉಳ್ಳಾಲ: ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪಾದಚಾರಿ ವ್ಯಕ್ತಿಯೋರ್ವರು ಸಾವಿಗೀಡಾದ ಘಟನೆ ಕುತ್ತಾರು ಸಮೀಪದ ಮದನಿ ನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ.

Sponsored

ಮುಂಡೋಳಿ ನಿವಾಸಿ ದಿನೇಶ್‌ ಗಟ್ಟಿ (50) ಮೃತಪಟ್ಟ ವ್ಯಕ್ತಿ.

ದಿನೇಶ್‌ ಗಟ್ಟಿ ಅವರು ಮಂಗಳವಾರ ರಾತ್ರಿ ಮದನಿ ನಗರ ಎಂಬಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ವೇಗವಾಗಿ ಬಂದ ಬೈಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಕೂಡಲೇ ಆತ ಬೈಕ್‌ ಏರಿ ಸ್ಥಳದಿಂದ ಪರಾರಿಯಾಗಿದ್ದಾನೆ. ದಿನೇಶ್‌ ಗಟ್ಟಿ ಅವರು ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಬುಧವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.