ಶನಿವಾರ, 24 ಅಕ್ಟೋಬರ್ 2026

ನಂತೂರು: ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ನಂತೂರು ಜಂಕ್ಷನ್‌ ಬಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಕಾಣಿಸಿದೆ. ಕದ್ರಿ ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿರುವ ಘಟನೆ ನಡೆದಿದೆ.

ಬೆಂಕಿ ಹೊತ್ತಿಕೊಂಡ ಕೊಠಡಿಯಲ್ಲಿ ಶೇಖರಿಸಿಟ್ಟಿದ್ದ ವಿವಿಧ ಸೊತ್ತುಗಳು ಹಾನಿಗೀಡಾಗಿದೆ. ಒಟ್ಟು ಎಷ್ಟು ನಷ್ಟವಾಗಿದೆ ಎನ್ನುವ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸಕಾಲದಲ್ಲಿ ಬೆಂಕಿ ಶಮನಗೊಳಿಸಿದ ಪರಿಣಾಮ ಹೆಚ್ಚಿನ ಅನಾಹುತ ತಪ್ಪಿದೆ. ಅಪಾರ್ಟ್‌ಮೆಂಟ್‌ ಆಗಿದ್ದ ಕಾರಣ ಕೆಲ ಹೊತ್ತು ಆತಂಕಕ್ಕೆ ಕಾರಣವಾಯಿತು.