ಶನಿವಾರ, 24 ಅಕ್ಟೋಬರ್ 2026

ನೆಲ್ಯಾಡಿ: ನೀರಕಟ್ಟೆ ಬಳಿ ಸ್ಕೂಟಿಗೆ ಲಾರಿ ಡಿಕ್ಕಿ, ಸವಾರ ಸಾವು, ಮಹಿಳೆ ಸ್ಥಿತಿ ಗಂಭೀರ

ನೆಲ್ಯಾಡಿ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೀರಕಟ್ಟೆ ಎನ್ನುವಲ್ಲಿ ಬುಧವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿಯಲ್ಲಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ

ನೀರಕಟ್ಟೆ ಪ್ರದೇಶದಲ್ಲಿ ಸ್ಕೂಟಿ ಮತ್ತು ಲಾರಿ ನಡುವೆ ಈ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟಿ ಸವಾರ ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆಂದು ರವಾನಿಸಲಾಗಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣವೇ ಅಥವಾ ಇನ್ಯಾವುದೇ ತಾಂತ್ರಿಕ ದೋಷವೇ ಎನ್ನುವುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.