ಭಾನುವಾರ, 25 ಅಕ್ಟೋಬರ್ 2026
Trending

ಪುತ್ತೂರು: ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಮನೆಯ ಕಾಂಪೌಂಡ್‌ಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌

ಪುತ್ತೂರು: ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಪ್ರಯತ್ನ ಪಟ್ಟಿದ್ದು ಆದರೆ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮನೆಯ ಕಾಂಪೌಂಡ್‌ಗೆ ಗುದ್ದಿದ ಘಟನೆ ಬುಧವಾರ ಬೆಳಿಗ್ಗೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.

Sponsored

ದರ್ಬೆಯ ದುಗ್ಗಮ್ಮ ದೇರಣ್ಣ ಹಾಲ್‌ನ ತುಸು ದೂರದಲ್ಲಿ ಬೆಳಿಗ್ಗೆ ಸುಮಾರು 8 ಗಂಟೆಗೆ ಈ ಘಟನೆ ನಡೆದಿದೆ. ಪುತ್ತೂರಿನಿಂದ ಕುಂಬ್ರದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ದರ್ಬೆ ವೃತ್ತವನ್ನು ದಾಟಿ ಫಿಲೋಮಿನಾ ಕಾಲೇಜು ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ.

ಈ ವೇಳೆ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಬಸ್ಸನ್ನು ಎಡಭಾಗಕ್ಕೆ ತಿರುಗಿಸಿದ್ದು, ನಂತರ ಬಸ್‌ ಸುಮಾರು 50 ಅಡಿ ದೂರ ಸಾಗಿ ಮನೆಯ ಕಾಂಪೌಂಡ್‌ಗೆ ಗುದ್ದಿದೆ ಎಂದು ತಿಳಿದು ಬಂದಿದೆ.

ಬಸ್ಸಿನ ಬ್ರೇಕ್‌ ವೈಫಲ್ಯಗೊಂಡಿರುವುದೇ ನಿಯಂತ್ರಣ ತಪ್ಪಲು ಕಾರಣ ಎನ್ನಲಾಗುತ್ತಿದ್ದು, ಈ ಕುರಿತು ಪೊಲೀಸ್‌ ತನಿಖೆಯಿಂದ ಹೆಚ್ಚಿನ ಮಾಹಿತಿಯ ತಿಳಿದು ಬರಬೇಕಿದೆ.