ಚಾಮರಾಜನಗರ, ಸೆ.11: ಹನೂರು ತಾಲೂಕಿನ ಆರ್.ಎಸ್.ದೊಡ್ಡಿ ಸಮೀಪ ತಡರಾತ್ರಿ ಭೀಕರ ಅಪಘಾತ ನಡೆದಿದ್ದು, ಅಪರಿಚಿತ ಕಾರು ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದ್ದು, ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹನೂರು ತಾಲೂಕಿನ ಕೊಪ್ಪ ಗ್ರಾಮದ ನಿವಾಸಿಗಳಾದ ರಮೇಶ್, ಸುರೇಶ್ ಮತ್ತು ಮುನಿಯಪ್ಪ ಮೃತ ವ್ಯಕ್ತಿಗಳು.
ಬೈಕ್ ಸವಾರರಿಗೆ ಡಿಕ್ಕಿ ಹೊಡೆದು ಕಾರು ನಿಲ್ಲಿಸದೇ ಎಸ್ಕೇಪ್ ಆಗಿದ್ದಾರೆ.
ರಾತ್ರಿ ವೇಳೆ ಕೊಪ್ಪ ಗ್ರಾಮದಿಂದ ಆರ್.ಎಸ್.ದೊಡ್ಡಿ ಮಾರ್ಗವಾಗಿ ಕೊಳ್ಳೇಗಾಲದ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಹುಲಸುಗುಡ್ಡೆ ಸಮೀಪ ತಡರಾತ್ರಿ ಹಿಂದಿನಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ. ಕಾರು ನಿಲ್ಲಿಸದೇ ಪರಾರಿಯಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೋರ್ವ ಆಸ್ಪತ್ರೆಯಲ್ಲಿ ಸಾವಿಗೀಡಾಗಿರುವುದಾಗಿ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಹನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಪರಾರಿಯಾದ ಕಾರು ಮತ್ತು ಚಾಲಕನ ಪತ್ತೆಗೆ ಮುಂದಾಗಿದ್ದಾರೆ.




