ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ನೂತನ ಕಾರೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡ ಘಟನೆ ನಿನ್ನೆ (ಜು.3) ರ ಸಂಜೆ ಗಾಂಧಿನಗರದಲ್ಲಿ ನಡೆದಿದೆ.
Sponsoredಮಂಗಳೂರಿನಿಂದ ನೂತನವಾಗಿ ಖರೀದಿ ಮಾಡಿದ್ದ ಕಾರಿನಲ್ಲಿ ದಂಪತಿ ಮಡಿಕೇರಿ ಕಡೆಗೆ ಪ್ರಯಾಣ ಮಾಡುತ್ತಿದ್ದರು. ಗಾಂಧಿನಗರದ ಸಮೀಪಕ್ಕೆ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
Marriage AdSponsoredಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆಗೆ ಗಾಯಗಳಾಗಿದ್ದು, ಸ್ಥಳೀಯರು ಕೂಡಲೇ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.




