ಸೋಮವಾರ, 26 ಅಕ್ಟೋಬರ್ 2026
Trending

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್‌ಪಿಜಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿ

ಉಡುಪಿ: ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಎಲ್‌ಪಿಜಿ ಗ್ಯಾಸ್‌ ಸಾಗಿಸುತ್ತಿದ್ದ ಟ್ಯಾಂಕರ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

Sponsored

ಕಾಪು ತಾಲೂಕಿನ ಕಟಪಾಡಿಯಲ್ಲಿ ಕಾಮಗಾರಿ ನಡೆಯುತ್ತಿದ್ದ ಹೆದ್ದಾರಿಯಲ್ಲಿ ಗ್ಯಾಸ್‌ ಟ್ಯಾಂಕರ್‌ ಸಾಗುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಹೀಗಾಗಿ ಸ್ಥಳದಲ್ಲಿ ಆತಂಕದ ವಾತಾವರಣ ಉಂಟಾಯಿತು. ಘಟನೆ ಸಂಬಂಧ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್‌ ಸೋರಿಕೆ ಆಗಿದೆಯೇ ಎನ್ನುವುದನ್ನು ಪರಿಶೀಲನೆ ಮಾಡಿದ್ದಾರೆ.

ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆಲಕಾಲ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತು.