ತುಮಕೂರು: ಎಸ್‌ಐಆರ್ ಪ್ರಕ್ರಿಯೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ ಗ್ರಾಮ ಲೆಕ್ಕಾಧಿಕಾರಿ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ತುಮಕೂರಿನ ಗೂಳೂರಿನಲ್ಲಿ ನಡೆದಿದೆ.
Sponsoredಭಾವನಾ (26) ಗಂಭೀರ ಗಾಯಗೊಂಡಿರುವ ವಿಎ.
ಗೂಳೂರು ಹೋಬಳಿಯ ಮನೆ ಮನೆಗೆ ತೆರಳುವ ಸಂದರ್ಭದಲ್ಲಿ ಈ ಅಪಘಾತ ನಡೆದಿದೆ. ಭಾವನಾಗೆ ಸಿದ್ಧಗಂಗಾ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




