ವಿಟ್ಲ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಾವನ್ನು ತಪ್ಪಿಸಲು ಹೋಗಿ ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲ ಸಮೀಪದ ಕೆಲಿಂಜದ ಪೆಲತ್ತಡ್ಕ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
Sponsoredಕಲ್ಲಡ್ಕದಿಂದ ವಿಟ್ಲ ಕಡೆಗೆ ಸಂಚರಿಸುತ್ತಿದ್ದ ಆಟೋ ರಿಕ್ಷಾ ಪೆಲತ್ತಡ್ಕ ತಲುಪಿದಾಗ, ರಸ್ತೆಯಲ್ಲಿ ಹಾವು ಬಂದಿದೆ. ಈ ವೇಳೆ ಆಟೋ ಮುಂದಿದ್ದ ವಾಹನದ ಚಾಲಕ ಹಾವನ್ನು ರಕ್ಷಿಸಲು ತಕ್ಷಣ ಬ್ರೇಕ್ ಹಾಕಿದ್ದಾರೆ. ಮುಂದಿನ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಆಟೋ ಚಾಲಕ ಸಡನ್ ಆಗಿ ತನ್ನ ವಾಹನವನ್ನು ಬಲಕ್ಕೆ ತಿರುಗಿಸಿದ್ದಾರೆ.
ಈ ಸಂದರ್ಭದಲ್ಲಿ ಎದುರು ದಿಕ್ಕಿನಿಂದ ಅಂದರೆ ವಿಟ್ಲದಿಂದ ಕಲ್ಲಡ್ಕದತ್ತ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಆಟೋ ರಿಕ್ಷಾ ನೇರವಾಗಿ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.




