ಶನಿವಾರ, 24 ಅಕ್ಟೋಬರ್ 2026

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಟಿಪ್ಪರ್‌, ಇಬ್ಬರು ಗಂಭೀರ

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್‌ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಉಕ್ಕುಡದ ದರ್ಬೆ ಬಳಿ ನಡೆದಿದೆ. ಅಪಘಾತದ ಪರಿಣಾಮ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ವರದಿಯಾಗಿದೆ.

ಪುತ್ತೂರು ಮೂಲದ ದಿನೇಶ್‌ ಮತ್ತು ಅಂಕಿತ್‌ ಗಾಯಾಳುಗಳು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.