ಅಂದರ್- ಬಾಹರ್ ಆಟ | ಒಟ್ಟು11 ಮಂದಿ ಅಂದರ್ !

ಮಂಗಳೂರಿನ ಬಿಕರ್ನಕಟ್ಟೆಯ ಬಾಡಿಗೆ ಮನೆಯಲ್ಲಿ ಅಕ್ರಮ ಜೂಜಾಟ ಅಂದರ್- ಬಾಹರ್ ಆಟ ಆಡುತ್ತಿದ್ದ ಆರೋಪದಲ್ಲಿ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ರಾಜೇಂದ್ರ ಹಲ್ದಾರ್(41), ಕನಕಪ್ಪ ಕೋಟಿ(40), ರಾಘವೇಂದ್ರ(24), ಉಮೇಶ ರಾಮಪ್ಪ ಚೌಡಪ್ಪ,(24), ಲಕ್ಷ್ಮಪ್ಪ (37),

ಸೈಕಲ್‌ಗೆ ಲಾರಿ ಡಿಕ್ಕಿ, ಸೈಕಲ್ ಸವಾರ ಸ್ಥಳದಲ್ಲೇ ಮೃತ್ಯು

ಮಂಗಳೂರು : ರಾ.ಹೆ.ಯ ಬೈಕಂಪಾಡಿಯಲ್ಲಿ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ. ಮೃತ ಸೈಕಲ್ ಸವಾರನನ್ನು ಮಧು ಕೆ. ಎಂದು ಗುರುತಿಸಲಾಗಿದೆ. ಈತ ಹೈ ರೇಂಜ್ ಸೆಕ್ಯುರಿಟಿ ಸರ್ವಿಸಸ್‌ನ ಉದ್ಯೋಗಿ ಎಂದು ತಿಳಿದುಬಂದಿದೆ.

ಬೆಳಗ್ಗೆ 7 ರಿಂದ ಪಡಿತರ ವಿತರಣೆ, ತಂಬ್ ಗೆ ಒತ್ತಾಯಿಸುವಂತಿಲ್ಲ | ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

ದ.ಕ.ಜಿಲ್ಲೆಯ ನ್ಯಾಯಬೆಲೆ ಅಂಗಡಿದಾರರು ಬೆಳಗ್ಗೆ ಏಳು ಗಂಟೆಗೆ ಪಡಿತರ ವಿತರಣೆ ಮಾಡಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ. ಪಡಿತರ ಚೀಟಿದಾರರು ಅಧಿಕ ಸಂಖ್ಯೆಯಲ್ಲಿ ಬಂದರೆ ಆದ್ಯತೆಯ ಮೇರೆಗೆ ಸಾಲಿನಲ್ಲಿ ನಿಲ್ಲಲು ಟೋಕನ್ ಗಳನ್ನು ನೀಡಿ ಪಡಿತರ

ಪೆರುವಾಜೆ : ಕಾಪುತಕಾಡಿನಲ್ಲಿ ಕಾಡುಕೋಣಗಳ ಓಡಾಟ

ಸುಳ್ಯ : ಸವಣೂರು-ಬೆಳ್ಳಾರೆ ರಸ್ತೆಯ ಕುಂಡಡ್ಕ ಸಮೀಪದ ಕಾಪುತಕಾಡಿನಲ್ಲಿ ಕಾಡುಕೋಣಗಳ ಓಡಾಟ ಕಾಣಸಿಕ್ಕಿದೆ. ಬೆಳ್ಳಾರೆಗೆ ಹೋಗುವ ರಸ್ತೆಯಲ್ಲಿ ಪಾತಾಜೆ ,ಪೂವಾಜೆ ಭಾಗದಿಂದ ಚೆನ್ನಾವರ ಭಾಗಕ್ಕೆ ಹೊಂದಿಕೊಂಡಿರುವ ಕಾಡಿನತ್ತ ಕಾಡುಕೋಣಗಳು ಹೋಗಿವೆ. ಜನವಸತಿ ಹಾಗೂ ಕೃಷಿ ಭೂಮಿ ಹೆಚ್ಚಿರುವ

ವಿಟ್ಲ: ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ಸಭೆ

ವಿಟ್ಲ ಸರ್ಕಾರಿ ಶಾಲೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಟಾಸ್ಕ್ ಪೋರ್ಸ್ ಸಮಿತಿ ಸಭೆಯು ಪುತ್ತೂರು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ವತಿಯಿಂದ ಆಶಾಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರಿಗೆಆಕ್ಸಿಮೀಟರ್, ಗ್ಲಾಸ್, ಸ್ಯಾನಿಟೈಸರ್, ಮಾಸ್ಕ್,

ಮುಕ್ಕೂರು ಕೋವಿಡ್ ನಿಯಂತ್ರಣ ಕಾರ್ಯಪಡೆ ಸಭೆ

ಮುಕ್ಕೂರು : ಪೆರುವಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಕ್ಕೂರು ವಾರ್ಡ್‌ನಲ್ಲಿ ಕೋವಿಡ್ ನಿಯಂತ್ರಣ ಕಾರ್ಯಪಡೆಯ ಪ್ರಥಮ ಸಭೆ ಹಾಗೂ ಆಶಾ ಕಾರ್ಯಕರ್ತೆರ್ಯರಿಗೆ ಪಲ್ಸ್ ಆಕ್ಸಿ ಮೀಟರ್, ಪುಡ್ ಕಿಟ್ ವಿತರಣೆಯು ಮುಕ್ಕೂರು ಶಾಲಾ ವಠಾರದಲ್ಲಿ ಮೇ 21 ರಂದು ನಡೆಯಿತು. ಸಭಾ ಅಧ್ಯಕ್ಷತೆಯನ್ನು

ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ವರ್ಗಾವಣೆ ಆದೇಶ ರದ್ದು

ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರನ್ನು ಬುಧವಾರ ರಾತ್ರಿ ವರ್ಗಾವಣೆ ಮಾಡಲಾಗಿದ್ದು, ಆದರೆ ಗುರುವಾರ ಬೆಳಗ್ಗೆ ರವಿ ಅವರ ವರ್ಗಾವಣೆ ಆದೇಶ ರದ್ದಾಗಿದೆ. ಮೂರು ತಿಂಗಳ ಅಂತರದಲ್ಲಿ ಎರಡು ಬಾರಿ ವರ್ಗಾವಣೆ ಆಗಿದ್ದರೂ ಕೂಡಾ ಎರಡು ಬಾರಿಯೂ ಅವರ ವರ್ಗಾವಣೆ ಆದೇಶ ರದ್ದು ಮಾಡಲಾಗಿದೆ.

ಖ್ಯಾತ ಪರಿಸರವಾದಿ, ಅಪ್ಪಿಕೋ ಚಳವಳಿ ನೇತಾರ ಸುಂದರ್ ಲಾಲ್ ಬಹುಗುಣ ಕೋವಿಡ್ ನಿಂದ ವಿಧಿವಶ

ಖ್ಯಾತ ಪರಿಸರವಾದಿ, ಚಿಪ್ಕೊ ಚಳವಳಿ ಮುಖಂಡ ಮತ್ತು ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಸುಂದರ್ ಲಾಲ್ ಬಹುಗುಣ (94ವರ್ಷ) ಅವರು ಕೋವಿಡ್ 19 ಸೋಂಕಿನಿಂದ ಶುಕ್ರವಾರ(ಮೇ 21) ರಿಷಿಕೇಶದ ಏಮ್ಸ್ ನಲ್ಲಿ ನಿಧನರಾಗಿರುವುದಾಗಿ ವರದಿ ತಿಳಿಸಿದೆ. ಖ್ಯಾತ ಪರಿಸರವಾದಿ ಸುಂದರ್ ಲಾಲ್ ಬಹುಗುಣ್ ಅವರು

ಕೋವಿಡ್ ಹರಡುವುದನ್ನು ತಡೆಯಲು ಕೇಂದ್ರದ ಹೊಸ ಮಾರ್ಗಸೂಚಿ ಪ್ರಕಟ

ಕೇಂದ್ರ ಸರಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಕೆ. ವಿಜಯರಾಘವನ್ ಗುರುವಾರ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದ್ದಾರೆ. ಕೋವಿಡ್ ಹರಡುವುದನ್ನು ತಡೆಗಟ್ಟುವ ವಿಧಾನದ ಬಗ್ಗೆ ವಿವರಿಸಿದ ಮಾರ್ಗಸೂಚಿ ಇದಾಗಿದೆ. ವ್ಯಕ್ತಿಗಳ ಬಗ್ಗೆ ಸುರಕ್ಷಿತ ಅಂತರ ಪಾಲನೆ, ಮಾಸ್ಕ್ ಧಾರಣೆಯ ಹೊರತಾಗಿ, ಉತ್ತಮ

ಪತ್ರಕರ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ…

ಮಂಗಳೂರು: ಪತ್ರಕರ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರು