Home Business Arecanut News: ಅಡಕೆ ನಿಷೇಧದ ಕುರಿತು ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್‌ನ್ಯೂಸ್‌

Arecanut News: ಅಡಕೆ ನಿಷೇಧದ ಕುರಿತು ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್‌ನ್ಯೂಸ್‌

Hindu neighbor gifts plot of land

Hindu neighbour gifts land to Muslim journalist

Mangalore: ಅಡಕೆಯಲ್ಲಿ ಸಾರಗಳು ಶಕ್ತಿಕಾಲಿ ಕ್ಯಾನ್ಸರ್‌ ಪ್ರತಿಬಂಧಕ ಗುಣಗಳನ್ನು ಹೊಂದಿದೆ ಎನ್ನುವುದು ದೃಢಪಟ್ಟಿದೆ. ಈ ಕುರಿತು ಮಾಹಿತಿಯನ್ನು ಯೆನೆಪೋಯ ವಿಶ್ವವಿದ್ಯಾಲಯದ ಅಡಕೆ ಕುರಿತ ಅಧ್ಯಯನ ವರದಿಯನ್ನು ಕ್ಯಾಂಪ್ಕೋ ಸ್ವಾಗತ ಮಾಡಿದೆ.

ಕ್ಯಾಂಪ್ಕೋ ಅಧ್ಯಕ್ಷ ಎ ಕಿಶೋರ್‌ ಕುಮಾರ್‌ ಕೊಡ್ಗಿ, ಅಡಿಕೆಯ ಸಾರಗಳು ಕ್ಯಾನ್ಸರ್‌ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯುತ್ತದೆ. ಇದು ಸಾಮಾನ್ಯ ಕೋಶಗಳಿಗೆ ಹಾನಿ ಉಂಟು ಮಾಡುವುದಿಲ್ಲ ಎಂದು ಅಧ್ಯಯನದ ಅಂಶಗಳಾಗಿದೆ. ಸಾಂಪ್ರದಾಯಿಕವಾಗಿ ಸಂಸ್ಕರಿಸಿದ ಅಡಕೆಯನ್ನು ಬಳಸಿದರೆ ಆರೋಗ್ಯದಾಯಕ ಲಾಭಗಳಿದೆ ಎಂದು ಜನಸಾಮಾನ್ಯರ ನಂಬಿಕೆಗೆ ವೈಜ್ಞಾನಿಕ ಸಾಕ್ಷ್ಯಾಧಾರ ಒದಗಿಸಿದೆ ಎಂದು ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಅಡಕೆಯನ್ನು ಕ್ಯಾನ್ಸರ್‌ ಕಾರಕ ಎಂದು ವರ್ಗೀಕರಿಸಿರುವುದು ಕಪೋಲಕಲ್ಪಿತವಾಗಿದೆ. ಕ್ಯಾಂಪ್ಕೋದ ಈ ಪ್ರತಿಪಾದನೆಗೆ ಯೆನೆಪೋಯ ವಿಶ್ವವಿದ್ಯಾಲಯದ ಅಡಕೆ ಕುರಿತ ಅಧ್ಯಯನ ವರದಿ ಪ್ರಬಲವಾದ ಪುರಾವೆಯಾಗಿದೆ. ಈ ರೀತಿಯ ವೈಜ್ಞಾನಿಕ ದೃಢೀಕರಣಗಳಿಂದ ಲಕ್ಷಾಂತರ ಅಡಿಕೆ ಬೆಳೆಗಾರರ ಹಿತಾಸಕ್ತಿ ರಕ್ಷಿಸಲು, ಉತ್ಪನ್ನದ ಕುರಿತಾದ ತಪ್ಪು ಕಲ್ಪನೆಗಳನ್ನು ದೂರವಾಗಿಸಲು ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಹೇಳಿದ್ದಾರೆ.