Home Business Petrol Diesel Price: ವಾಹನ ಸವಾರರಿಗೆ ಗುಡ್‌ ನ್ಯೂಸ್‌; ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಭಾರೀ ಅಗ್ಗ!!!

Petrol Diesel Price: ವಾಹನ ಸವಾರರಿಗೆ ಗುಡ್‌ ನ್ಯೂಸ್‌; ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಭಾರೀ ಅಗ್ಗ!!!

Hindu neighbor gifts plot of land

Hindu neighbour gifts land to Muslim journalist

Petrol-Diesel Price : ಮೇ 2022ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ (Petrol-Diesel Price)ಯಾವುದೇ ಬದಲಾವಣೆಯಾಗಿಲ್ಲ ಹೆಚ್ಚುತ್ತಿರುವ ತೈಲ ಬೆಲೆಗಳು(Crude oil price)ಜನರ ಜೇಬಿನ ಮೇಲೆ ಭಾರೀ ಪರಿಣಾಮ ಬೀರುತ್ತಿದ್ದು ಆದರೆ, ಈ ಹೊರೆಯಿಂದ ಶೀಘ್ರದಲ್ಲೇ ಪರಿಹಾರ ಸಿಗುವ ನಿರೀಕ್ಷೆಯಿದೆ.

ಕಚ್ಚಾ ತೈಲದ ಬೆಲೆಯಲ್ಲಿ ನಿರಂತರ ಇಳಿಕೆಯ ಪರಿಣಾಮ ತೈಲ ಬೆಲೆ ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 80 ಡಾಲರ್‌ಗಿಂತ ಕಡಿಮೆಯಾಗಿದ್ದು, ಹೀಗಾಗಿ, ಸರ್ಕಾರ ಶೀಘ್ರದಲ್ಲೇ ತೈಲ ಬೆಲೆ ಇಳಿಸುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಲೋಕಸಭೆ ಚುನಾವಣೆಗೂ ಮುನ್ನ ತೈಲ ಬೆಲೆ ಇಳಿಕೆ ಮಾಡುವ ಮೂಲಕ ಸರ್ಕಾರ ವಾಹನ ಸವಾರರಿಗೆ ಸಿಹಿ ಸುದ್ದಿ ನೀಡುವ ನಿರೀಕ್ಷೆಯಿದೆ.

ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರ್ಕೆಟಿಂಗ್ ಮಾರ್ಜಿನ್ ಅನ್ನು ಕ್ರಮವಾಗಿ ಲೀಟರ್‌ಗೆ 11 ಮತ್ತು 6 ರೂ.ಯಷ್ಟು ಕಡಿಮೆ ಮಾಡಬಹುದು ಎನ್ನಲಾಗಿದೆ. ಹೀಗಾಗಿ, ಲೋಕಸಭೆ ಚುನಾವಣೆಗೂ ಮುನ್ನ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಗಣನೀಯವಾಗಿ ಇಳಿಕೆ ಮಾಡಿ ಜನಸಾಮಾನ್ಯರಿಗೆ ಕೊಂಚಮಟ್ಟಿಗೆ ರಿಲೀಫ್ ನೀಡುವ ಸಾಧ್ಯತೆಯಿದೆ.

ಕ್ರೆಡಿಟ್ ರೇಟಿಂಗ್ ಏಜೆನ್ಸಿ ಐಸಿಆರ್‌ಎ ಮಾಹಿತಿ ಅನುಸಾರ, ಕಚ್ಚಾ ತೈಲ ಬೆಲೆ ಕುಸಿತದಿಂದಾಗಿ, ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳಾದ ಐಒಸಿ, ಎಚ್‌ಪಿಸಿಎಲ್, ಬಿಪಿಸಿಎಲ್ ಪ್ರತಿ ಲೀಟರ್ ಪೆಟ್ರೋಲ್‌ನಲ್ಲಿ 11 ರೂ ಮತ್ತು ಪ್ರತಿ ಲೀಟರ್ ಡೀಸೆಲ್‌ನಲ್ಲಿ 6 ರೂ ಲಾಭ ಗಳಿಸಬಹುದು. ಕಂಪನಿಗಳ ಹೆಚ್ಚಿದ ಮಾರ್ಜಿನ್‌ಗಳಿಂದಾಗಿ, ಪೆಟ್ರೋಲ್ ಮತ್ತು ಡೀಸೆಲ್‌ನ ಚಿಲ್ಲರೆ ಬೆಲೆಯಲ್ಲಿ ಇಳಿಕೆ ಆಗುವ ಸಾಧ್ಯತೆ ಇದೆ ಎಂದು ICRA ತಿಳಿಸಿದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಸ್ಥಿರವಾಗಿದ್ದರೆ, ಶೀಘ್ರದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ಗೆ 5 ರಿಂದ 10 ರೂಪಾಯಿಗಳಷ್ಟು ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿದೆ.