Home Business Gold Deposits: ಕರ್ನಾಟಕದ ಈ ಜಿಲ್ಲೆಗಳ ಅರಣ್ಯ ಪ್ರದೇಶಗಳಲ್ಲಿ ಭಾರಿ ಚಿನ್ನದ ನಿಕ್ಷೇಪ ಪತ್ತೆ !!...

Gold Deposits: ಕರ್ನಾಟಕದ ಈ ಜಿಲ್ಲೆಗಳ ಅರಣ್ಯ ಪ್ರದೇಶಗಳಲ್ಲಿ ಭಾರಿ ಚಿನ್ನದ ನಿಕ್ಷೇಪ ಪತ್ತೆ !! ಅಗೆಯುವ ಬಗ್ಗೆ ಏನು ಹೇಳ್ತು ಅರಣ್ಯ ಇಲಾಖೆ?

Hindu neighbor gifts plot of land

Hindu neighbour gifts land to Muslim journalist

Gold Deposits: ಚಿಕ್ಕಮಗಳೂರು ಜಿಲ್ಲೆಯ ತರಿಕೆರೆಯಲ್ಲಿ ಚಿನ್ನದ ಅದಿರು ಇದೆ ಎಂಬ ಮಾಹಿತಿ ಲಭ್ಯವಾಗಿತ್ತು. ಈ ಬೆನ್ನಲ್ಲೇ ಕೊಪ್ಪಳ (Koppal)ಮತ್ತು ರಾಯಚೂರಿನಲ್ಲಿ (Raichur) ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಮತ್ತು ಲಿಥಿಯಂ ಕಂಡುಬಂದಿದೆ ಎಂದು ಹೇಳಲಾಗಿದೆ.

ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಚಿನ್ನ ಮತ್ತು ಇತರ ಅಪರೂಪದ ಖನಿಜಗಳ ಅಧ್ಯಯನ ಮತ್ತು ಪರಿಶೋಧನೆ ನಡೆಯುತ್ತಿರುವ 65 ಸ್ಥಳಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಕೊಪ್ಪಳ ಮತ್ತು ರಾಯಚೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಮತ್ತು ಲಿಥಿಯಂ ಕಂಡುಬಂದಿದೆ. ಆದರೆ ಈ ಪ್ರದೇಶಗಳು ಸಂರಕ್ಷಿತ ಅರಣ್ಯ ಪ್ರದೇಶಗಳಡಿಯಲ್ಲಿ ಬರುವುದರಿಂದ ನಿಕ್ಷೇಪ ಹೊರತೆಗೆಯುವಿಕೆ ಮತ್ತು ವಿವರವಾದ ಸಂಶೋಧನೆ ಸ್ಥಗಿತಗೊಂಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಇಲಾಖೆ, ಮೊಟ್ಟ ಮೊದಲ ಬಾರಿಗೆ ಕೊಪ್ಪಳ ಜಿಲ್ಲೆಯ ಅಮ್ರಾಪುರ ಬ್ಲಾಕ್‌ನಲ್ಲಿ ನಾವು ಪ್ರತಿ ಟನ್‌ಗೆ 12-14 ಗ್ರಾಂ ಚಿನ್ನವನ್ನು ಶೋಧಿಸಿದ್ದೇವೆ. ಸಾಮಾನ್ಯವಾಗಿ ಅಧ್ಯಯನ ಮತ್ತು ಗಣಿಗಾರಿಕೆಯ ಸಮಯದಲ್ಲಿ ಪ್ರತಿ ಟನ್‌ಗೆ ಸುಮಾರು 2-3 ಗ್ರಾಂ ಚಿನ್ನ ಸಿಗುತ್ತದೆ. ಹಟ್ಟಿ ಚಿನ್ನದ ಗಣಿಗಳಲ್ಲಿ ಸುಮಾರು 2-2.5 ಗ್ರಾಂ ಚಿನ್ನ ಸಿಗಬಹುದು. ಆದರೆ ಕೊಪ್ಪಳದಲ್ಲಿರುವ ಈ ಸ್ಥಳ ಸಂರಕ್ಷಿತ ಅರಣ್ಯದ ನಡುವೆ ಇರುವುದರಿಂದ ನಾವು ಅರಣ್ಯ ತೆರವಿಗೆ ಅರ್ಜಿ ಸಲ್ಲಿಸಿದ್ದೇವೆ ಎಂದು ಹೇಳಿದೆ.