Home Business Moto E13: ಇಂದು ಮಧ್ಯಾಹ್ನದಿಂದ ಸಿಗಲಿದೆ ಕೇವಲ 6,999 ರೂ.ಗೆ ಈ ಸ್ಮಾರ್ಟ್​ಫೋನ್!!

Moto E13: ಇಂದು ಮಧ್ಯಾಹ್ನದಿಂದ ಸಿಗಲಿದೆ ಕೇವಲ 6,999 ರೂ.ಗೆ ಈ ಸ್ಮಾರ್ಟ್​ಫೋನ್!!

Hindu neighbor gifts plot of land

Hindu neighbour gifts land to Muslim journalist

ಪ್ರಸಿದ್ಧ ಮೋಟೋರೊಲಾ (Motorola) ಕಂಪನಿ ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಮೊಬೈಲ್​ಗಳನ್ನು ಬಿಡುಗಡೆ ಮಾಡುತ್ತಲೇ ಇರುತ್ತದೆ. ಈಗಾಗಲೇ ಕಳೆದ ವಾರ ಕಂಪನಿ ಮೋಟೋ ಇ13 (Moto E13) ಎಂಬ ಹೊಸ ಫೋನನ್ನು ಬಿಡುಗಡೆ ಮಾಡಿದ್ದು ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿರುವ ಈ ಫೋನ್ ಇಂದಿನಿಂದ ದೇಶದಲ್ಲಿ ಮಾರಾಟ ಆಗಲಿದೆ ಎಂದು ಮಾಹಿತಿ ದೊರೆತಿದೆ.

ಹೌದು ಫೆಬ್ರವರಿ 15 ಅಂದರೆ ಇಂದು ಮಧ್ಯಾಹ್ನ 12 ಗಂಟೆಯಿಂದ ಕೇವಲ 6,999 ರೂ. ಗೆ MOTO E13 ಸ್ಮಾರ್ಟ್ ಫೋನ್ ಖರೀದಿಸಬಹುದಾಗಿದೆ. ಮೋಟೋ ಇ13 (Moto E13) ಎಂಬ ಹೊಸ ಫೋನನ್ನು ಬಿಡುಗಡೆ ಮಾಡಿದ್ದು ಇದು ಅತ್ಯಂತ ಕಡಿಮೆ ಬೆಲೆಯ ಸ್ಮಾರ್ಟ್​ಫೋನ್ ಆಗಿದ್ದರೂ ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿದೆ.

ಮೋಟೋ E13 ಸ್ಮಾರ್ಟ್‌ಫೋನ್ ಫೀಚರ್ಸ್:
• ಈ ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ IPS LCD ಡಿಸ್‌ಪ್ಲೇ ಹೊಂದಿದೆ. ಇದು 90Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಆಕ್ಟಾ-ಕೋರ್ T606 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 OS ಜೊತೆಗೆ ರನ್ ಆಗಲುತ್ತಿದ್ದು 1TB ವರೆಗೆ ಮೆಮೋರಿಯನ್ನು ಹೆಚ್ಚಿಸಬಹುದಾಗಿದೆ.
• ಮೋಟೋ E13 ಸ್ಮಾರ್ಟ್‌ಫೋನ್‌ ಸಿಂಗಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹಾಗೂ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಕ್ಯಾಮೆರಾಗಳ ಮೂಲಕ 30fps ಫುಲ್‌ HD ವಿಡಿಯೋವನ್ನು ರೆಕಾರ್ಡಿಂಗ್ ಮಾಡಬಹುದು. ಜೊತೆಗೆ ಪನೋರಮ, ಪೋಟ್ರೆಟ್, ನೈಟ್ ವರ್ಷನ್, ಡ್ಯುಯೆಲ್ ಕಾಪ್ಚರ್, ಲೈವ್ ಫಿಲ್ಟರ್ ಸೇರಿದಂತೆ ಅನೇಕ ಆಯ್ಕೆಗಳಿವೆ.
• ಮೋಟೋ E13 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬಲವನ್ನು ಪಡೆದಿದೆ. ಇದು 10W ಚಾರ್ಜಿಂಗ್ ವೇಗವನ್ನು ಬೆಂಬಲಿಸುತ್ತದೆ.
• ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಹೆಡ್‌ಫೋನ್ ಜ್ಯಾಕ್‌, ವೈಫೈ, ಬ್ಲೂಟೂತ್ v5.0 ಬೆಂಬಲ ಪಡೆದುಕೊಂಡಿದೆ. ಇದು 5ಜಿ ಬೆಂಬಲ ಪಡೆದುಕೊಂಡಿಲ್ಲ ಬದಲಾಗಿ 4G VoLTE ಸಪೋರ್ಟ್ ಮಾಡುತ್ತದೆ.

ಮೋಟೋ E13 ಸ್ಮಾರ್ಟ್‌ಫೋನ್​ ಭಾರತದಲ್ಲಿ ಒಟ್ಟು ಎರಡು ಸ್ಟೋರೇಜ್ ಆಯ್ಕೆಯನ್ನು ರಿಲೀಸ್ ಆಗಿದೆ. ಇದರ 2GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಯ ಬೆಲೆ ಕೇವಲ 6,999 ರೂ. ಆಗಿದೆ. ಅಂತೆಯೆ 4GB RAM ಮತ್ತು 64GB ಸ್ಟೋರೇಜ್ ಸಾಮರ್ಥ್ಯಕ್ಕೆ 7,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ಖರೀದಿಗೆ ಸಿಗಲಿದೆ.