ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನ ಮುಂದಿನ ಕಂತು ಸಿಗಬೇಕಿದ್ದರೆ ekYC ಕಡ್ಡಾಯ | ಇನ್ನು ಉಳಿದಿರುವುದು ಕೇವಲ 2 ದಿನ, ಕೊನೆಯ ದಿನಾಂಕ ಗಮನಿಸಿ
ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು 2018 ರಲ್ಲಿ ಪಿಎಂ ಕಿಸಾನ್ ಯೋಜನೆಯನ್ನು ಪ್ರಾರಂಭಿಸಿದರು. ಈ ಯೋಜನೆಯಡಿ, ನೋಂದಾಯಿತ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಾಗಿ ವಾರ್ಷಿಕ 6,000 ರೂ. ಮೊತ್ತವನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಈ ಬಾರಿಯ ಪಿಎಂ ಕಿಸಾನ್ನ 11 ನೇ ಕಂತನ್ನು ಇದೇ ತಿಂಗಳ ಕೊನೆಯಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಇತ್ತೀಚಿಗೆ ಹೇಳಿದ್ದಾರೆ. …