ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಮಾಧ್ಯಮದವರ ಮುಂದೆ ದರ್ಪ ತೋರಿ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಅಮಿತ್ ಮಾಳವೀಯ (Amit Malviya) ರವರು ಆರೋಪ ಮಾಡಿದ್ದಾರೆ.
ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ ಮಾಡುತ್ತಿದ್ದು, ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.