ಸೋಮವಾರ, 2 ನವೆಂಬರ್ 2026

News

ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ | 18 ಜಾನುವಾರು ವಶಕ್ಕೆ,ಇಬ್ಬರ ಬಂಧನ

ಹುಬ್ಬಳ್ಳಿಯಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಬುಧವಾರ ಬೆಳಗ್ಗೆ ಪಡುಬಿದ್ರಿಯಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ 18 ಜಾನುವಾರುಗಳನ್ನು ರಕ್ಷಿಸಲಾಗಿದೆ. ಚಾಲಕ ಹುಬ್ಬಳ್ಳಿಯ ಕಲಂದರ್‌ (33) ಮತ್ತು ಕ್ಲೀನರ್‌ ಕಲಘಟಗಿಯ ಅಬ್ದುಲ್‌ ರೆಹಮಾನ್‌ (35)…

ಪತ್ರಕರ್ತರ ನಗರ ವಾಸ್ತವ್ಯಕ್ಕೆ ಪಾಲಿಕೆಯಿಂದ ಸಹಕಾರ: ಅಕ್ಷಯ್ ಶ್ರೀಧರ್

ಮಂಗಳೂರು, ಅ.27: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರು ನಡೆಸುತ್ತಿರುವ ಗ್ರಾಮ ವಾಸ್ತವ್ಯ ಮಾದರಿ ಕಾರ್ಯಕ್ರಮ. ಇದು ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದ್ದು, ಪತ್ರಕರ್ತರು ನಗರದಲ್ಲಿ ವಾಸ್ತವ್ಯ ಕಾರ್ಯಕ್ರಮ ಮಾಡುವುದಾದರೆ ಪಾಲಿಕೆ ವತಿಯಿಂದ ಸಹಕಾರ ನೀಡುವುದಾಗಿ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್…

ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಜನರ ಬಳಿಗೆ ತಲುಪಿಸಬೇಕು-ಸಚಿವ ಎಸ್ ಅಂಗಾರ

ಕಡಬ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಯಕ್ತಿಕ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಲು ಜನರಿಗೆ ಮಾಹಿತಿಗಳ ಕೊರತೆಯಿದೆ. ಈ ನಿಟ್ಟಿನಲ್ಲಿ ಸಂಬಂದ ಪಟ್ಟ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯೋಜನೆಗಳನ್ನು ಜನರಿಗೆ ಬಳಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಜಿಲ್ಲಾ…

ಪುತ್ತೂರು ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ!!! ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಆರೋಪಿತ ವ್ಯಕ್ತಿ ಕುದ್ಕಾಡಿ ನಾರಾಯಣ ರೈ ನ್ಯಾಯಾಲಯಕ್ಕೆ ಹಾಜರು

ಪುತ್ತೂರು ತಾಲೂಕಿನ ಬಡಗನ್ನೂರಿನ ಅಪ್ರಾಪ್ತ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪಿ ಎಂದು ಬಾಲಕಿ ಹೆಸರಿಸಿರುವ ಕುದ್ಕಡಿ ನಾರಾಯಣ ರೈ ಬಂಧನ ಭೀತಿಯಿಂದ ಇಂದು ವಕೀಲರ ಮೂಲಕ ಪುತ್ತೂರಿನ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.…

ಬೆಳ್ತಂಗಡಿ | ವೇಣೂರಿನಲ್ಲಿ ಯುವಕನೋರ್ವ ಕಾಲು ಜಾರಿ ನದಿಗೆ ಬಿದ್ದು ಸಾವು

ಯುವಕನೋರ್ವ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ವೇಣೂರಿನ ಸರೋಜಾ ಎಂಬವರ ಪುತ್ರ ಚಂದ್ರಶೇಖರ್ (22) ಎಂದು ಗುರುತಿಸಲಾಗಿದೆ. ಈತ ಶ್ರೀನಿಧಿ ಎಂಟರ್ಪ್ರೈಸಸ್ ಅಲ್ಲಿ ಕೆಲಸ ಮಾಡುತ್ತಿದ್ದು, ಶಾಮಿಯಾನದ ಪೆಂಡಲ್…

ನಂದಿನಿ ಹಾಲಿನ ಉತ್ಪನ್ನಗಳನ್ನು ಗರಿಷ್ಠ ಮಾರಾಟ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಡೀಲರ್‌ಶಿಪ್ ರದ್ದು-ಹಾಲು ಒಕ್ಕೂಟದ ಆದೇಶ

ನಂದಿನಿ ಹಾಲಿನ ಡೀಲರುಗಳು ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗರಿಷ್ಟ ಮಾರಾಟ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಡೀಲರ್‌ಶಿಪ್ ರದ್ದು ಪಡಿಸಲಾಗುವುದು ಎಂದು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾರುಕಟ್ಟೆ ವ್ಯವಸ್ಥಾಪಕರು…

ರಸ್ತೆ ದಾಟುತ್ತಿದ್ದ ಬಾಲಕನಿಗೆ ಬೈಕ್ ಡಿಕ್ಕಿ | ನೆಲಕ್ಕೆ ಬಿದ್ದಾತನ ಮೇಲೆ ಆಟೋ ಗೂಡ್ಸ್ ಚಲಿಸಿ ಬಾಲಕ ಸಾವು

ರಸ್ತೆ ದಾಟುತ್ತಿದ್ದ ಬಾಲಕನಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬಳಿಕ ಗೂಡ್ಸ್ ಆಟೊದಡಿಗೆ ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಕಾಞಂಗಾಡ್ ನ ಅತಿಂಞಾಲ್ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಚುಳ್ಳಿಕೆರೆಯ ಬಿಜು ಎಂಬವರ ಪುತ್ರ ಆಶಿಲ್(15)…

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ | ತುಟ್ಟಿಭತ್ಯೆ ಶೇ.3 ರಷ್ಟು ಏರಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಇತ್ತೀಚೆಗೆ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ ಸಿಕ್ಕಿದ್ದಾಯ್ತು, ಇದೀಗ ರಾಜ್ಯ ಸರ್ಕಾರಿ ನೌಕರರಿಗೆ ಹಬ್ಬದ ಸಿಹಿ ಸುದ್ದಿ ಬಂದಿದೆ. ರಾಜ್ಯ ಸರ್ಕಾರದ ನೌಕರರಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ(ಡಿಎ)ಯನ್ನು ಶೇ.3 ರಷ್ಟು ಏರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…

ನೆಲ್ಯಾಡಿ: ಬೈಕ್ ಹಾಗೂ ಕಾರಿನ ನಡುವೆ ಅಪಘಾತ | ಬೈಕ್ ಸವಾರ ಪೊಲೀಸ್ ಸಿಬ್ಬಂದಿಗೆ ಗಾಯ

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಲಾವತಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡಿರುವ ಬೈಕ್ ಸವಾರನನ್ನು ಮಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿಯಾಗಿರುವ ಸಿದ್ದಪ್ಪ ಎಂದು…

ಮಕ್ಕಳ ಸುರಕ್ಷತೆಗಾಗಿಯೇ ಜಾರಿಯಾಗಿದೆ ಹೊಸ ನಿಯಮ |ಇನ್ನು ಮುಂದೆ ಬೈಕ್ ನಲ್ಲಿ ಮಕ್ಕಳನ್ನು ಹಿಂಬದಿ ಕೂರಿಸಿಕೊಂಡು ಪ್ರಯಾಣಿಸುವಾಗ ಎಚ್ಚರ.. ಎಚ್ಚರ ..!!

ನವದೆಹಲಿ: ಇಲ್ಲಿಯವರೆಗೆ ಅದೆಷ್ಟೋ ಪೋಷಕರು ತಮ್ಮ ಮಕ್ಕಳನ್ನು ಬೈಕ್ ಹತ್ತಿಸಿ ಎಲ್ಲಿಂದ ಎಲ್ಲಿಗೋ ಪ್ರಯಾಣ ನಡೆಸುತಿದ್ದರು. ಆದ್ರೆ ಇದಕ್ಕೆಲ್ಲ ಬ್ರೇಕ್ ಎಂಬಂತೆ,ಸಣ್ಣ ಮಕ್ಕಳನ್ನು ಬೈಕ್ ನಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊಸ…