ಇನ್ನು ಮುಂದೆ KEA ಮೂಲಕ ವಿವಿ ಬೋಧಕ ಹುದ್ದೆಗಳ ನೇಮಕ | ಮೆರಿಟ್ ಪಟ್ಟಿಯಲ್ಲೇ ಆಯ್ಕೆ, ಶಿಕ್ಷಣ ಸಚಿವರಿಂದ ಮಹತ್ವದ ಸೂಚನೆ!
ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಮೆರಿಟ್ ಪಟ್ಟಿಯ ಪ್ರಕಾರ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ವಿಶ್ವವಿದ್ಯಾಲಯಗಳು ಸಂದರ್ಶನಕ್ಕೆ ಆಹ್ವಾನಿಸಿ, ನೇಮಕಾತಿಯನ್ನು ಮಾಡಿಕೊಳ್ಳಬಹುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಇದೊಂದು ಹೊಸ ವ್ಯವಸ್ಥೆ ಆಗಿದ್ದು, ನೇಮಕಾತಿಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಈ ಸುಧಾರಣೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು …