18 ನೇ ವಯಸ್ಸಿಗೆ ಪ್ರಧಾನಿಯನ್ನೇ ಆಯ್ಕೆ ಮಾಡುವ ಹಕ್ಕಿರುವಾಗ, ಹೆಣ್ಣಿಗೆ ಬಾಳಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕಿಲ್ಲ ಏಕೆ??- ಸಂಸದ ಓವೈಸಿ ಪ್ರಶ್ನೆ
ಕೇಂದ್ರ ಸರ್ಕಾರ ಕೆಲದಿನಗಳ ಹಿಂದೆಯಷ್ಟೇ ಹೆಣ್ಣುಮಕ್ಕಳ ಮದುವೆಯ ವಯಸ್ಸನ್ನು 18ರಿಂದ 25ಕ್ಕೆ ಏರಿಕೆ ಮಾಡಿದೆ. ಇದಕ್ಕೆ ದೇಶದಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದ್ದೆಯಾದರೂ, ಕೆಲವು ಟೀಕೆಗಳು ಇದೀಗ ಕೇಳಿಬರುತ್ತಿದೆ. 18ನೇ ವಯಸ್ಸಿಗೆ ಹೆಣ್ಣುಮಕ್ಕಳು ಪ್ರಧಾನಿಯನ್ನು ಆಯ್ಕೆ ಮಾಡುವ ಹಕ್ಕಿದೆ ಎಂದ ಮೇಲೆ, ಬಾಳ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಯಾಕಿಲ್ಲ ಎಂದು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18 ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ …