Home Breaking Entertainment News Kannada Actor Tandav Ram: ಸಿನಿಮಾ ನಿರ್ದೇಶಕನಿಗೆ ನಟ ತಾಂಡವ್ ರಾಮ್ ಗುಂಡು ಹಾರಿಸಿ ಬೆದರಿಕೆ!...

Actor Tandav Ram: ಸಿನಿಮಾ ನಿರ್ದೇಶಕನಿಗೆ ನಟ ತಾಂಡವ್ ರಾಮ್ ಗುಂಡು ಹಾರಿಸಿ ಬೆದರಿಕೆ! ನಟನ ಬಂಧನ

Hindu neighbor gifts plot of land

Hindu neighbour gifts land to Muslim journalist

Actor Tandav Ram: ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಆರೋಪ ಹಿನ್ನಲೆ ‘ಜೋಡಿಹಕ್ಕಿ’, ‘ಭೂಮಿಗೆ ಬಂದ ಭಗವಂತ’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿರುವ ನಟ ತಾಂಡವ್ ರಾಮ್ (Actor Tandav Ram) ಅನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಹೌದು, ‘ಮುಗಿಲ್ ಪೇಟೆ’ಸಿನಿಮಾ ನಿರ್ದೇಶನ ಮಾಡಿದ್ದ ಭರತ್ ಮೇಲೆ ನಟ ತಾಂಡವ್ ರಾಮ್ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ. ಇದೀಗ ಬೆಂಗಳೂರಿನ ಚಂದ್ರಾ ಲೇಔಟ್​ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ತಾಂಡವ್ ರಾಮ್ ಅನ್ನು ಪೊಲೀಸರು ಬಂದಿಸಿದ್ದಾರೆ. ತಾಂಡವ್ ರಾಮ್ ಕೆಲ ಧಾರಾವಾಹಿಗಳು ಹಾಗೂ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ನಿರ್ದೇಶನ ಮಾಡುತ್ತಿದ್ದ ಸಿನಿಮಾವನ್ನು ಅರ್ಧಕ್ಕೆ ನಿಲ್ಲಿಸಿದ ಕಾರಣ ಅವರ ಮೇಲಿನ ಕೋಪದಲ್ಲಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ನಿರ್ದೇಶಕ ಭರತ್, ಸಿನಿಮಾ ಒಂದನ್ನು ನಿರ್ದೇಶಿಸುತ್ತಿದ್ದು, ಸಿನಿಮಾದಲ್ಲಿ ತಾಂಡವ್ ರಾಮ್ ನಟಿಸುತ್ತಿದ್ದರು. ಆದರೆ ಆ ಸಿನಿಮಾವನ್ನು ಭರತ್ ನಿಲ್ಲಿಸಿದ್ದರು. ಇದರಿಂದ ಕೋಪಗೊಂಡಿದ್ದ ತಾಂಡವ್ ರಾಮ್, ನಿರ್ದೇಶಕ ಭರತ್​ಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ. ಜೊತೆಗೆ ಒಂದು ಸುತ್ತು ಗುಂಡು ಹಾರಿಸಿ ಕೊಲ್ಲುವ ಯತ್ನ ಮಾಡಿದ್ದಾರೆ.

ಇದೀಗ ತಾಂಡವ್ ರಾಮ್ ಅನ್ನು ಕೊಲೆ ಯತ್ನ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಪರವಾನಗಿ ಹೊಂದಿದ್ದ ಅವರ ಬಂದೂಕನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.