Home Breaking Entertainment News Kannada ಹೀರೋ ಆಗಿ ಮಿಂಚಲು ರೆಡಿಯಾದ್ರು ನೋಡಿ ನಮ್ಮ ‘ಕೆಜಿಎಫ್ ತಾತಾ’ !!

ಹೀರೋ ಆಗಿ ಮಿಂಚಲು ರೆಡಿಯಾದ್ರು ನೋಡಿ ನಮ್ಮ ‘ಕೆಜಿಎಫ್ ತಾತಾ’ !!

Hindu neighbor gifts plot of land

Hindu neighbour gifts land to Muslim journalist

ಕರ್ನಾಟಕದ ಸಿನಿಪ್ರಿಯರಿಗೆ ‘ಕೆಜಿಎಫ್’ ಸಿನಿಮಾ ಸದಾ ಅಚ್ಚಳಿಯದೆ ಮನದಲ್ಲಿ ಉಳಿಯುವ ಸಿನಿಮಾಗಳಲ್ಲಿ ಒಂದು ಎಂದು ಹೇಳಿದರೆ ತಪ್ಪಾಗಲಾರದು. ಆ ಸಿನಿಮಾದಲ್ಲಿ ‘ನಿಮಗೊಂದು ಸಲಹೆ ಕೊಡ್ತೀನಿ.. ನೀವು ಮಾತ್ರ ಅವನಿಗೆ ಅಡ್ಡ ನಿಲ್ಲೋದಕ್ಕೆ ಹೋಗ್ಬೇಡಿ ಸಾರ್‌..’ ಎಂಬ ಡೈಲಾಗ್ ಮೂಲಕ ಮಿಂಚಿದ್ದ ತಾತ ಇದೀಗ ಹೀರೋ..!

ಹೌದು. ‘ಕೆಜಿಎಫ್ 1 & 2’ ಸಿನಿಮಾದಲ್ಲಿ ಮುದುಕನ ಪಾತ್ರದಲ್ಲಿ ಕಾಣಿಸಿಕೊಂಡು ಡೈಲಾಗ್ ಮೂಲಕ ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣ ಜಿ ರಾವ್ ಇದೀಗ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ‘ಕೆಜಿಎಫ್’ ತಾತ ಅಂತಾನೇ ಖ್ಯಾತಿ ಪಡೆದಿರುವ ಕೃಷ್ಣ ಜಿ ರಾವ್ ‘ಕೆಮಿಸ್ಟ್ರೀ ಆಫ್ ಕರಿಯಪ್ಪ’ ಸಿನಿಮಾದ ಸಾರಥಿ ಕುಮಾರ್ ನಿರ್ದೇಶನದ ಹೊಸ ಸಿನಿಮಾ ‘ನ್ಯಾನೋ ನಾರಾಯಣಪ್ಪ’ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.

10 ತಲೆಯುಳ್ಳ ರಾವಣನ ಅವತಾರದಲ್ಲಿ ರಿಲೀಸ್ ಆಗಿರುವ ಫಸ್ಟ್ ಲುಕ್ ನಲ್ಲಿ ಕೃಷ್ಣ ಜಿ ರಾವ್ ಕಿರೀಟ, ಗ್ಲಾಸ್ ಹಾಕಿ ಫೋಸ್ ಕೊಟ್ಟಿದ್ದಾರೆ. ನ್ಯಾನೋ ಕಾರು ಕೂಡ ಹೈಲೇಟ್ ಆಗಿದ್ದು, ಒಂದಷ್ಟು ಪ್ರತಿಭಾನ್ವಿತ ಕಲಾವಿದರು ಪೋಸ್ಟರ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಆನಂತು, ಅಪೂರ್ವ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸ್ತಿದ್ದಾರೆ.

‘ಕೆಮಿಸ್ಟ್ರೀ ಆಫ್ ಕರಿಯಪ್ಪ’ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ಉಣಬಡಿಸಿದ್ದ ನಿರ್ದೇಶಕ ಕುಮಾರ್ ‘ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾದಲ್ಲಿ ಬೆಟ್ಟಿಂಗ್ ಧಂದೆಯ ಕರಾಳತೆಯನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದರು. ಇದೀಗ ‘ನ್ಯಾನೋ ನಾರಾಯಣಪ್ಪ’ ಸಿನಿಮಾದ ಮೂಲಕ ಮತ್ತೊಮ್ಮೆ ಚಿತ್ರಪ್ರೇಮಿಗಳನ್ನು ಎಂಟರ್‍ಟೈನ್ ಮಾಡಲು ಸಜ್ಜಾಗಿದ್ದಾರೆ. ಈ ಚಿತ್ರಕ್ಕೆ ಕುಮಾರ್ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಬಂಡವಾಳ ಕೂಡ ಹೂಡಿದ್ದಾರೆ. ಇದೊಂದು ಕಾಮಿಡಿ ಎಮೋಷನಲ್ ಡ್ರಾಮ್ ಸಿನಿಮಾವಾಗಿದ್ದು, ತುಂಬಾ ಕಾಡುವ ಕಥೆ, ಮನೆ ಮಂದಿಯಲ್ಲಾ ಕುಳಿತು ನೋಡುವ ಸಿನಿಮಾ ಆಗಿದೆ ಅಂತಾ ಕುಮಾರ್ ಹೇಳಿದ್ದಾರೆ.

ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಆಗಸ್ಟ್ ನಲ್ಲಿ ಸಿನಿಮಾವನ್ನು ತೆರೆಗೆ ತರಲು ಯೋಜನೆ ಹಾಕಿಕೊಂಡಿದೆ. ಕುಮಾರ್ ನಿರ್ಮಾಣದ ‘ನ್ಯಾನೋ‌ ನಾರಾಯಣಪ್ಪ’ ಸಿನಿಮಾಗೆ ರಾಜಶಿವಶಂಕರ ಛಾಯಾಗ್ರಾಹಣ, ಆಕಾಶ್ ಪರ್ವ ಸಂಗೀತ, ಸಿದ್ದು ಸಂಕಲನವಿದೆ. ಸದ್ಯ ಚಿತ್ರದ ಫಸ್ಟ್ ಲುಕ್ ರಿವೀಲ್ ಮಾಡಿರುವ ಚಿತ್ರತಂಡ ಶೀರ್ಘವೇ ಟೀಸರ್ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆ.