Home Breaking Entertainment News Kannada ಐಪಿಎಲ್ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ತ್ಯಜಿಸಿದ ಜಡೇಜಾ !! | ಕ್ಯಾಪ್ಟನ್...

ಐಪಿಎಲ್ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ತ್ಯಜಿಸಿದ ಜಡೇಜಾ !! | ಕ್ಯಾಪ್ಟನ್ ಕೂಲ್ ಧೋನಿಗೆ ಸಾರಥಿಯಾಗಿ ಮರು ಪಟ್ಟ

Hindu neighbor gifts plot of land

Hindu neighbour gifts land to Muslim journalist

ಈ ಬಾರಿಯ ಐಪಿಎಲ್ ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾ ತೊರೆದಿದ್ದು, ಆ ಬಳಿಕ ಇದೀಗ ಮಹೇಂದ್ರ ಸಿಂಗ್ ಧೋನಿಗೆ ಮತ್ತೆ ನಾಯಕತ್ವದ ಪಟ್ಟ ಕಟ್ಟಲಾಗಿದೆ.

15ನೇ ಆವೃತ್ತಿ ಐಪಿಎಲ್ ಆರಂಭಕ್ಕೂ ಮುನ್ನ ಧೋನಿ, ಆಲ್‍ರೌಂಡರ್ ಜಡೇಜಾಗೆ ನಾಯಕತ್ವ ವಹಿಸಿದ್ದರು. ಆದರೆ ಜಡೇಜಾ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀನಾಯ ಪ್ರದರ್ಶನ ತೋರಿ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

ಚೆನ್ನೈ ತಂಡ 15ನೇ ಆವೃತ್ತಿ ಐಪಿಎಲ್‍ನಲ್ಲಿ ಒಟ್ಟು 8 ಪಂದ್ಯಗಳನ್ನು ಆಡಿದ್ದು, 2 ಜಯ ಮತ್ತು 6 ಸೋಲು ಕಂಡು 4 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಈಗಾಗಲೇ ಬಹುತೇಕ ಪ್ಲೆ ಆಫ್ ಅವಕಾಶ ಕಳೆದುಕೊಂಡಿರುವ ಚೆನ್ನೈ ಇನ್ನೂಳಿದ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಮೇಲೆರುವ  ಪ್ರಯತ್ನದಲ್ಲಿದೆ.