Home Breaking Entertainment News Kannada Kantara Chapter1: ಆಸ್ಕರ್ ಅಂಗಳಕ್ಕೆ ʻಕಾಂತಾರ: ಚಾಪ್ಟರ್ 1ʼ

Kantara Chapter1: ಆಸ್ಕರ್ ಅಂಗಳಕ್ಕೆ ʻಕಾಂತಾರ: ಚಾಪ್ಟರ್ 1ʼ

Hindu neighbor gifts plot of land

Hindu neighbour gifts land to Muslim journalist

Kantara Chapter1: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ಅಂಗಳಕ್ಕೆ ಕಾಲಿಟ್ಟಿದೆ. ʻಮಹಾವತಾರ್‌ ನರಸಿಂಹʼ ಹಾಗೂ ʻಕಾಂತಾರ: ಅಧ್ಯಾಯ 1ʼ (Kantara Chapter 1) ಚಿತ್ರಗಳು ಅಧಿಕೃತವಾಗಿ ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್‌ನಲ್ಲಿ ಸ್ಥಾನ ಪಡೆದುಕೊಂಡಿವೆ. ಇದು ಭಾರತೀಯ ಚಿತ್ರರಂಗಕ್ಕೆ ಹೆಮ್ಮೆ ಹಾಗೂ ಐತಿಹಾಸಿಕ ಕ್ಷಣವಾಗಿದೆ.

ಆಸ್ಕರ್‌ ಪ್ರಶಸ್ತಿ ರೇಸ್‌ನಲ್ಲಿರುವ ಚಿತ್ರಗಳ ಅಂತಿಮ ಪಟ್ಟಿ ಜ.22 ರಂದು ಪ್ರಕಟವಾಗಲಿದೆ. ಮಾರ್ಚ್‌ 15 ರಂದು ಚಿತ್ರಗಳಿಗೆ ಆಸ್ಕರ್‌ ಪ್ರಶಸ್ತಿ ನೀಡಲಾಗುತ್ತದೆ.ಕಳೆದ ವರ್ಷ ‘ಕಾಂತಾರ-1’ ಹಾಗೂ ‘ಮಹಾವತಾರ್‌ ನರಸಿಂಹ’ (Mahavatar narsimha) ಚಿತ್ರಗಳು ತೆರೆಕಂಡು ಜನಮನ ಗೆದ್ದಿದ್ದವು. ಇದೀಗ ‘ಕಾಂತಾರ ಚಾಪ್ಟರ್‌ – 1 ಹಾಗೂ ʻಮಹಾವತಾರ್‌ ನರಸಿಂಹʼ ಎರಡೂ ಚಿತ್ರಗಳು ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್‌ನಲ್ಲಿ ಜಾಗ ಮಾಡಿಕೊಂಡು ಆಸ್ಕರ್ ವಿಭಾಗದಲ್ಲಿ ಪರಿಗಣನೆಗೆ ಒಳಪಟ್ಟಿದೆ.